ಚಿಕ್ಕಮಗಳೂರು, ಏ 14 (DaijiworldNews/HR): ಬಿಜೆಪಿಯು ರಾಜ್ಯ ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮೂಡಿಗೆರೆಯಿಂದ ಎಂ.ಪಿ.ಕುಮಾರಸ್ವಾಮಿಗೆ ಟಿಕೆಟ್ ಮಿಸ್ ಆಗಿರುವುದರಿಂದ ಅಸಮಾಧಾನಗೊಂಡ ಅವರು ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಮೂಡಿಗೆರೆ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಶಿರಸಿಯಲ್ಲಿರುವ ಸ್ಪೀಕರ್ ಕಾಗೇರಿ ನಿವಾಸದಲ್ಲಿ ಶುಕ್ರವಾರ ಎಂ.ಪಿ.ಕುಮಾರಸ್ವಾಮಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಬಿಜೆಪಿ ಅಂತರಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದ ಕಾರಣ ಬಿಜೆಪಿ ಹೈಕಮಾಂಡ್ ದೀಪಕ್ ದೊಡ್ಡಯ್ಯನವರಿಗೆ ಮೂಡಿಗೆರೆ ಟಿಕೆಟ್ ಘೋಷಣೆ ಮಾಡಿದ್ದು, ಇದರಿಂದ ಅಸಮಧಾನಗೊಂಡಿದ್ದ ಎಂ.ಪಿ ಕುಮಾರಸ್ವಾಮಿ ಇಂದು ಕೊನೆಗೂ ಶಾಸಕ ಸ್ಥಾನದ ಜೊತೆಗೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.