ಜಮ್ಮು ಕಾಶ್ಮೀರಾ, ಏ 14 (DaijiworldNews/HR): ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಬೈಸಾಖಿ ಆಚರಣೆ ವೇಳೆ ಪಾದಚಾರಿ ಸೇತುವೆ ಕುಸಿದ ಪರಿಣಾಮ 80 ಮಂದಿ ಗಾಯಗೊಂಡಿದ್ದು, ಅದರಲ್ಲಿ 20 ರಿಂದ 25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಸೇತುವೆ ಕುಸಿದಾಗ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇತುವೆ ಮೇಲಿದ್ದರು ಎನ್ನಲಾಗಿದ್ದು, ಪೊಲೀಸರು ಮತ್ತು ರಕ್ಷಣಾ ತಂಡಗಳು ಘಟನಾ ಸ್ಥಳಕ್ಕೆ ತೆರಳಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ.
ಇನ್ನು ಘಟನೆಯಲ್ಲಿ ಎಲ್ಲಾ ಗಾಯಾಳುಗಳನ್ನು ಚೆನಾನಿ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ ಎನ್ನಲಾಗುತ್ತಿದೆ.