ಬೆಂಗಳೂರು, ಏ 14 (DaijiworldNews/SM): ಅಥಣಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈ ತಪ್ಪಿದ್ದಕ್ಕೆ ಅಸಮಾಧಾನಗೊಂಡಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸಂಗಪ್ಪ ಸವದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸಮ್ಮುಖದಲ್ಲಿ ಸವದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ ಚಂದ್ರಪ್ಪ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಮಾಜಿ ಸಚಿವರಾದ ವಿನಯ್ ಕುಲಕರ್ಣಿ, ಬಸವರಾಜ ರಾಯರೆಡ್ಡಿ, ಎ ಬಿ ಪಾಟೀಲ್, ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ, ಅಕ್ಕಪ್ಪ ಮತ್ತಿತರರು ಉಪಸ್ಥಿತರಿದ್ದರು. ಮಾಜಿ ಮುಖ್ಯಮಂತ್ರಿ ಅವರ ನಿವಾಸಕ್ಕೆ ತೆರಳಿ ಕಾಂಗ್ರೆಸ್ ಸೇರುವ ಬಗ್ಗೆ ಚರ್ಚೆ ನಡೆಸಿದ ಬಳಿಕ ಲಕ್ಷ್ಮಣ ಸವದಿ ಅವರು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದರು.