ನವದೆಹಲಿ,ಏ 15 (DaijiworldNews/HR): ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.
ಕೇಂದ್ರೀಯ ತನಿಖಾ ದಳ (ಸಿಬಿಐ) ಅರವಿಂದ್ ಕೇಜ್ರಿವಾಲ್ ಅವರಿಗೆ ಏಪ್ರಿಲ್. 16 ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದು, ಇದಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದ ನಂತರ ಕೇಂದ್ರ ಸರ್ಕಾರ ತಮ್ಮ ಮೇಲೆ ಒತ್ತಡ ಹೇರುತ್ತಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ.
ಇನ್ನು ಎಎಪಿ ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲು ಸಂಚು ರೂಪಿಸಲಾಗಿದೆ ಎಂದಿದ್ದಾರೆ.