ಬೆಂಗಳೂರು, ಏ 15 (DaijiworldNews/HR): ಕೆಎಸ್ಡಿಎಲ್ ಟೆಂಡರ್ಗಾಗಿ ಲಂಚ ಪಡೆದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.
ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ 5 ಲಕ್ಷ ಬಾಂಡ್, ಇಬ್ಬರ ಶ್ಯೂರಿಟಿ ಮೇಲೆ ಜಾಮೀನು ನೀಡಲಾಗಿದ್ದು, 3 ವಾರಕ್ಕೊಮ್ಮೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಬೇಕು ಮತ್ತು ತನಿಖಾಧಿಕಾರಿ ವಶಕ್ಕೆ ಪಾಸ್ ಪೋರ್ಟ್ ನೀಡಬೇಕು ಎಂಬ ಷರತ್ತು ಹಾಕಲಾಗಿದೆ.
ಇನ್ನು ಕರ್ನಾಟಕ ಸಾಬೂನು ಮಾರ್ಜಕ ಕಾರ್ಖಾನೆಗೆ ಭೇಟಿ ನೀಡುವಂತಿಲ್ಲ, ಸಾಕ್ಷ್ಯಾಧಾರ ನಾಶಪಡಿಸುವಂತಿಲ್ಲ ಎಂದು ಎಂದು ಷರತ್ತು ಹಾಕಿ ಜಾಮೀನು ನೀಡಲಾಗಿದೆ.