ಪ್ರಯಾಗ್ರಾಜ್, ಏ 16 (DaijiworldNews/HR): ಉತ್ತರಪ್ರದೇಶದ ಮಾಜಿ ಸಂಸದ, ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಹಾಗೂ ಅವರ ಸಹೋದರ ಅಶ್ರಫ್ ಅಹ್ಮದ್ ರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ.
ಉತ್ತರ ಪ್ರದೇಶದ ಪ್ರಯಾಗರಾಜ್ ನಗರದಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದಾಗ ಅತೀಕ್ ಸಹೋದರರನ್ನು ಗುಂಡಿಕ್ಕಿ ಕೊಲ್ಲಲಾಗಿದೆ.
ಫುಲ್ಪುರ್ ಕ್ಷೇತ್ರದ ಮಾಜಿ ಸಂಸದ ಅತೀಕ್ ಅಹ್ಮದ್ ಕೊಲೆ, ಸುಲಿಗೆ, ಅಪಹರಣ ಸೇರಿದಂತೆ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರನ್ನು ಬಿಗಿ ಭದ್ರತೆಯ ಜೈಲಿನಲ್ಲಿ ಇರಿಸಲಾಗಿತ್ತು. ವೈದ್ಯಕೀಯ ಚಿಕಿತ್ಸೆಗಾಗಿ ಅವರನ್ನು ಪೊಲೀಸ್ ರಕ್ಷಣೆಯಲ್ಲಿ ಪ್ರಯಾಗ್ರಾಜ್ಗೆ ಕರೆತರುವಾಗ ಅವರನ್ನು ಹತ್ಯೆಗೈಯಲಾಗಿದೆ ಎಂದು ವರದಿಯಾಗಿದೆ.
ಘಟನಾ ಸ್ಥಳದಿಂದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಗುರುವಾರವಷ್ಟೇ, ಪೊಲೀಸರು ಎನ್ಕೌಂಟರ್ನಲ್ಲಿ ಅತೀಕ್ ಪುತ್ರನನ್ನು ಹತ್ಯೆಗೈದಿದ್ದರು.