ನವದೆಹಲಿ, ಏ 16 (DaijiworldNews/HR): ಮಾಜಿ ಸಂಸದ ವಿವೇಕಾನಂದ ರೆಡ್ಡಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ವೈಎಸ್ ಭಾಸ್ಕರ್ ರೆಡ್ಡಿ ಅವರನ್ನು ಕೇಂದ್ರ ತನಿಖಾ ದಳ ಇಂದು ಬಂಧಿಸಿರುವುದಾಗಿ ವರದಿಯಾಗಿದೆ.
ವಿವೇಕಾನಂದ ರೆಡ್ಡಿ ಆಂಧ್ರಪ್ರದೇಶದ ದಿವಂಗತ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡಿ ಅವರ ಸಹೋದರ ಮತ್ತು ಹಾಲಿ ಎಪಿ ಸಿಎಂ ವೈಎಸ್ ಜಗನ್ಮೋಹನ್ ರೆಡ್ಡಿ ಅವರ ಚಿಕ್ಕಪ್ಪ.
ಇನ್ನು ರಾಜ್ಯ ವಿಧಾನಸಭಾ ಚುನಾವಣೆಗೆ ವಾರಗಳ ಮೊದಲು ಮಾರ್ಚ್ 15, 2019 ರ ರಾತ್ರಿ ಅವರ ಸೋದರಳಿಯ ಪ್ರತಿನಿಧಿಸುವ ಕ್ಷೇತ್ರವಾದ ಪುಲಿವೆಂದುಲದಲ್ಲಿನ ಅವರ ನಿವಾಸದಲ್ಲಿ ಅವರು ಕೊಲೆಯಾಗಿದ್ದಾರೆ.
ಈ ಪ್ರಕರಣವನ್ನು ಆರಂಭದಲ್ಲಿ ರಾಜ್ಯ ಅಪರಾಧ ತನಿಖಾ ವಿಭಾಗದ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸಿತು, ಆದರೆ, ಜುಲೈ 2020 ರಲ್ಲಿ ಸಿಬಿಐಗೆ ಹಸ್ತಾಂತರಿಸಲಾಯಿತು.