ಬೆಂಗಳೂರು, ಏ 17 (DaijiworldNews/MS): ನಾನೇ ಕಟ್ಟಿ ಬೆಳೆಸಿದ ಬಿಜೆಪಿ ಪಕ್ಷವು ಬಲವಂತವಾಗಿ ಹೊರ ಹಾಕುವ ಕೆಲಸವನ್ನು ಮಾಡಿದೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಶೆಟ್ಟರ್, ನನಗೆ ಯಾವುದೇ ಅಧಿಕಾರದ ಆಸೆಯೂ ಇಲ್ಲ. ಕಾಂಗ್ರೆಸ್ನಲ್ಲಿ ಒಂದು ಹೊಸ ಅಧ್ಯಯನ ಪ್ರಾರಂಭವಾಗಿದೆ. ಕಾಂಗ್ರೆಸ್ಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದಿದ್ದಾರೆ.
ಬಿಜೆಪಿಯ ರಾಜ್ಯದ ಕೆಲವು ನಾಯಕರು ನನ್ನನ್ನು ನಡೆಸಿಕೊಂಡಿರುವ ರೀತಿಯಿಂದ ಬಹಳ ಬೇಸರವಾಗಿದೆ. ಕೆಲವರು ತಮ್ಮ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದ್ದಾರೆ. ನನಗೆ ಬಹಳ ಅನ್ಯಾಯವಾಗಿದ್ದು, ನನ್ನನ್ನು ಗೌರವಯುತವಾಗಿ ಪಕ್ಷದಿಂದ ಕಳುಹಿಸಿಕೊಡುವ ಕೆಲಸವನ್ನೂ ಮಾಡಿಲ್ಲಎಂದಿದ್ದಾರೆ.
ನಾನು ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ ವಿರುದ್ದ ಟೀಕೆ ಮಾಡುತ್ತಿಲ್ಲ. ಇದೆಲ್ಲ ದೆಹಲಿ ನಾಯಕರ ಗಮನಕ್ಕೆ ಬರುತ್ತಿಲ್ಲ,ಇಲ್ಲಿ ಕೆಲವರು ತಮ್ಮ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದ್ದಾರೆ. ಪಕ್ಷದಿಂದ ಹೊರ ಹಾಕುವ ಷಡ್ಯಂತ್ರ ಮಾಡಿದರು ಎಂದು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದರು.