ನವದೆಹಲಿ, ಏ17 (DaiiworldNews/HR): ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಸಿಬಿಐ ಮತ್ತು ಇಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಸೋಮವಾರ ಮೇ 1 ರವರೆಗೆ ವಿಸ್ತರಿಸಿದೆ.
ಸಿಬಿಐ ಭ್ರಷ್ಟಾಚಾರ ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿದ್ದು, ಜಾರಿ ನಿರ್ದೇಶನಾಲಯವು ಈಗ ರದ್ದಾದ ಅಬಕಾರಿ ನೀತಿ ಪ್ರಕರಣದಲ್ಲಿ ಮನಿ ಲಾಂಡರಿಂಗ್ ಕೋನದ ಬಗ್ಗೆ ತನಿಖೆ ನಡೆಸುತ್ತಿದೆ.
ಇನ್ನು ಸಿಸೋಡಿಯಾ ಅಬಕಾರಿ ಇಲಾಖೆಯ ಮುಖ್ಯಸ್ಥರಾಗಿದ್ದು, ಹೊಸ ಮದ್ಯ ನೀತಿಯನ್ನ ರೂಪಿಸುವಾಗ ಮತ್ತು ಜಾರಿಗೆ ತರುವಾಗ ಅಕ್ರಮಗಳನ್ನ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.