ನವದೆಹಲಿ, ಏ17 (DaiiworldNews/HR): 2024ರ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆ ಎಂದು ಅಕ್ರಮ ಹಣ ವರ್ಗಾವಣೆ, ಸುಲಿಗೆ ಪ್ರಕರಣಗಳಲ್ಲಿ ಆರೋಪಿಯಾಗಿರುವ ವಂಚಕ ಸುಕೇಶ್ ಚಂದ್ರಶೇಖರ್ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವುದಾಗಿ ವರದಿಯಾಗಿದೆ.
ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ಆಮ್ ಆದ್ಮಿ ಪಕ್ಷ ಹಾಗೂ ಭಾರತ ರಾಷ್ಟ್ರ ಸಮಿತಿ ನಡುವೆ ಸಂಬಂಧ ಇರುವಂತಿದೆ ಎಂದು ಸುಕೇಶ್ ಚಂದ್ರಶೇಖರ್ ಆರೋಪಿಸಿದ್ದಾನೆ.
ಇನ್ನು ಈ ವಾರದ ಆರಂಭದಲ್ಲಿ ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ಆರೋಪಿಯಾಗಿ ಸದ್ಯ ತಿಹಾರ್ ಜೈಲಿನಲ್ಲಿರುವ ಆಪ್ನ ಸತ್ಯೇಂದ್ರ ಜೈನ್, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಹಾಗೂ ಭಾರತ ರಾಷ್ಟ್ರ ಸಮಿತಿ ಪಕ್ಷದ ವಿಧಾನ ಪರಿಷತ್ ಸದಸ್ಯೆ ಕೆ.ಕವಿತಾ ಸೇರಿದಂತೆ ಹಲವಾರು ರಾಜಕಾರಣಿಗಳೊಂದಿಗೆ ತಾನು ನಡೆಸಿದ್ದೇನೆ ಎನ್ನಲಾದ ವಾಟ್ಸ್ ಆಯಪ್ ಚಾಟ್ ಅನ್ನು ಆತ ಬಿಡುಗಡೆ ಮಾಡಿದ್ದ.