ರಬಕವಿ-ಬನಹಟ್ಟಿ, ಏ17 (DaiiworldNews/HR): ತೇರದಾಳ ವಿಧಾನ ಸಭಾ ಕ್ಷೇತ್ರದಲ್ಲಿ ನಟಿ, ಮಾಜಿ ಸಚಿವೆ ಉಮಾಶ್ರೀಯವರಿಗೆ ಕಾಂಗ್ರೆಸ್ ಪಕ್ಷದ ವರಿಷ್ಠರು ಸಿ ಫಾರ್ಮ್ ನೀಡಿ ಅವರಿಗೆ ಸ್ಪರ್ಧೆ ಮಾಡಲು ಅವಕಾಶ ನೀಡಬೇಕು. ಇಲ್ಲದಿದ್ದರೆ ಸಾಮೂಹಿಕ ರಾಜೀನಾಮೆ ನೀಡಲಾಗುವುದು. ಈ ಕ್ಷೇತ್ರದಲ್ಲಿ ಮಾಜಿ ಸಚಿವೆ ಉಮಾಶ್ರೀಗೆ ಟಿಕೆಟ್ ನೀಡಿದರೆ ಮಾತ್ರ ಗೆಲವು ಖಂಡಿತ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ನೀಲಕಂಠ ಮುತ್ತೂರ ತಿಳಿಸಿದ್ದಾರೆ.
ಭದ್ರನವರ ಬಿಲ್ಡಿಂಗ್ ಹತ್ತಿರ ಜಮಖಂಡಿ ಕುಡಚಿ ರಾಜ್ಯ ಹೆದ್ದಾರಿಯ ಮೇಲೆ ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಕ್ಷೇತ್ರದ ಕುರಿತು ಪಕ್ಷದ ವರಿಷ್ಠರ ಗಮನಕ್ಕೆ ತರಲಾಗಿತ್ತು. ಆದರೂ ಕೇವಲ ಆರು ತಿಂಗಳ ಹಿಂದೆ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ವ್ಯಕ್ತಿಗೆ ಟಿಕೆಟ್ ನೀಡಿದ್ದಾರೆ, ಇದರಿಂದಾಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲು ಅನುಭವಿಸಲಿದೆ ಎಂದರು.
ಇನ್ನು ಕಾಂಗ್ರೆಸ್ ಪಕ್ಷದ ವರಿಷ್ಠರು ತಾವು ನೀಡಿದ ಬಿ ಫಾರ್ಮ್ ನ್ನು ಮರಳಿ ಪಡೆದುಕೊಂಡು ಉಮಾಶ್ರೀಯವರಿಗೆ ಟಿಕೆಟ್ ನೀಡಿದ್ದೆ ಆದರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲು ಸಾಧ್ಯವಾಗುತ್ತದೆ ಎಂದು ಮುತ್ತೂರ ತಿಳಿಸಿದ್ದಾರೆ.