ಬೆಂಗಳೂರು, ಏ17 (DaiiworldNews/HR): ಬಾರಿ ಕುತೂಹಲ ಮೂಡಿಸಿದ್ದ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ.
10 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಲಾಗಿದೆ. ಆದರೆ ಈ ಪಟ್ಟಿಯಲ್ಲಿ ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿಯ ಹೆಸರನ್ನು ಇನ್ನೂ ಕೂಡ ಪ್ರಕಟ ಮಾಡಿಲ್ಲ.
ಇನ್ನು ಈಗಾಗಲೇ ಕೆ ಎಸ್ ಈಶ್ವರಪ್ಪನವರರು ಚುನಾವಣಾ ರಾಜಕೀಯ ನಿವೃತ್ತಿಯನ್ನ ಘೋಷಣೆ ಮಾಡಿದ್ದು ಶಿವಮೊಗ್ಗದಿಂದ ಅವರ ಪುತ್ರ ಕೆ ಈ ಕಾಂತೇಶ್, ಡಾ ಧನಂಜಯ್ ಸರ್ಜಿ, ಜ್ಯೋತಿಪ್ರಕಾಶ್, ಎಸ್ ಎಸ್ ಚನ್ನಬಸಪ್ಪನವರ ಹೆಸರುಗಳು ಮುಂಚೂಣಿಯಲ್ಲಿದೆ.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಮಹೇಶ್ ತೆಂಗಿನಕಾಯಿ ಅವರನ್ನು ಕಣಕ್ಕಿಳಿಸಲಾಗಿದೆ. ಹೆಬ್ಬಾಳ ಕ್ಷೇತ್ರದಲ್ಲಿ ಕಟ್ಟಾ ಸುಬ್ರಹ್ಮಣ್ಯ ಅವರ ಪುತ್ರ ಕಟ್ಟಾ ಜಗದೀಶ್ ಗೆ ಟಿಕೆಟ್ ನೀಡಲಾಗಿದೆ.
ಗೋವಿಂದರಾಜ ನಗರದಲ್ಲಿ ಉಮೇಶ್ ಶೆಟ್ಟಿ, ಮಹದೇವಪುರದಲ್ಲಿ ಅರವಿಂದ ಲಿಂಬಾವಳಿ ಪತ್ನಿ ಮಂಜುಳಾ ಅರವಿಂದ ಅವರಿಗೆ ಟಿಕೆಟ್ ನೀಡಲಾಗಿದೆ. ಕೃಷ್ಣರಾಜ ಕ್ಷೇತ್ರದಿಂದ ರಾಮದಾಸ್ ಬದಲು ಶ್ರೀವಾಸ್ತವ ಅವರಿಗೆ ಟಿಕೆಟ್ ನೀಡಲಾಗಿದೆ.