ನವದೆಹಲಿ, ಏ 17 (DaijiworldNews/MS): ಸಲಿಂಗ ವಿವಾಹಗಳನ್ನು ಅಂಗೀಕರಿಸಲು ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಇಂದಿನಿಂದ ನಡೆಸಲಿದೆ.
ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ಈ ಪ್ರಕರಣದ ವಿಚಾರಣೆ ನಡೆಸಲಿದೆ. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಬಾರದು.
ಸುಪ್ರೀಂಕೋರ್ಟ್ ಹೊಸ ವಿವಾಹ ವ್ಯವಸ್ಥೆಯನ್ನು ಪ್ರಾರಂಭಿಸಲು ಸಾಧ್ಯವಿಲ್ಲ. ಸಲಿಂಗ ವಿವಾಹ ಪದ್ಧತಿಯನ್ನು ಪರಿಗಣಿಸುವುದು ಸಂಸತ್ತಿನ ಕೆಲಸವೇ ಹೊರತು ಸುಪ್ರೀಂಕೋರ್ಟ್ ಅಲ್ಲ ಎಂದು ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ.
ಸಲಿಂಗ ವಿವಾಹಕ್ಕೆ ಮಾನ್ಯತೆ ಕೋರಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಪಿ ಎಸ್ ನರಸಿಂಹ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಸಾಂವಿಧಾನಿಕ ಪೀಠ ಇಂದಿನಿಂದ ಅರ್ಜಿಗಳ ವಿಚಾರಣೆ ನಡೆಸಲಿದೆ.