ಹುಬ್ಬಳ್ಳಿ, ಏ 17 (DaijiworldNews/MS): ನನಗೆ ಈ ಬಾರಿಯ ಚುನಾವಣೆಯಲ್ಲಿ ಬಿಚ್ಚ್ ಭಾಜಪದ ರಾಷ್ಟ್ರೀಯ ಸಂಘಟನಾ ಕಾರ್ಯಾದರ್ಶಿ ಬಿ.ಎಲ್. ಸಂತೋಷ್ ಅವರೇ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇರ ವಾಗ್ದಾಳಿ ನಡೆಸಿದ್ದಾರೆ.
ಮಂಗಳವಾರದಂದು, ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ದಿಡೀರ್ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿ.ಎಲ್. ಸಂತೋಷ್ ವಿರುದ್ದ ಗಂಬೀರ ಆರೋಪ ಮಾಡಿದರು. ಬಿಜೆಪಿಯ ಸ್ಕ್ರೀನಿಂಗ್ ಕಮಿಟಿಯಲ್ಲಿ ನನ್ನ ಹೆಸರು ಇತ್ತು ಅನ್ನೋದು ಗೊತ್ತಿದೆ. ಆದರೆ ಹೈಕಮಾಂಡ್ ಲೇವಲ್ ನಲ್ಲಿ ಏನು ನಡೆದಿದೆಯೋ ಗೊತ್ತಿಲ್ಲ.
ಹಲವಾರು ದಿನಗಳಿಂದ ನಾನು ವೇದನೆ ಅನುಭವಿಸಿದ್ದೇನೆ. ಇದಕ್ಕೆ ಕೇವಲ ಟಿಕೆಟ್ ಕಾರಣ ಅಲ್ಲ. ಟಿಕೆಟ್ ತಪ್ಪೋಕೆ ಕಾರಣ ಆದವರ ಹೆಸರು ಹೇಳೋ ಸಮಯ ಇವತ್ತು ಬಂದಿದೆ. ನಾನು ಈ ಹಿಂದೆ ಸಮಯ ಬಂದಾಗ ಹೇಳುತ್ತೇನೆ ಅಂದಿದ್ದೆನನ್ನ ವಿರುದ್ದ ಬಿಎಲ್ ಸಂತೋಷ್ ಅವರು ಹೈಕಮಾಂಡ್ ಬಳಿ ಅಪಪ್ರಚಾರ ನಡೆಸಿತು. ಅವರ ಟೀಂ ಕೂಡ ನನ್ನ ವಿರುದ್ಧ ಅಪಪ್ರಚಾರ ಮಾಡಿದರು. ನನ್ನ ವಿರುದ್ಧ ತಂತ್ರಗಾರಿಕೆ ಮಾಡಿದರು. ಅವರಿಂದಲೇ ನನಗೆ ಟಿಕೆಟ್ ತಪ್ಪಿತ್ತು ಎಂದು ಎಂದು ಕಾಂಗ್ರೆಸ್ ಮುಖಂಡ ಜಗದೀಶ್ ಶೆಟ್ಟರ್ ಹೇಳಿದ್ದಾರೆ.