ಶಿವಮೊಗ್ಗ, ಏ 19 (DaijiworldNews/MS): ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ತೀವ್ರ ರಾಜಕೀಯ ಸಂಚಲನಕ್ಕೆ ಕಾರಣರಾಗಿದ್ದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಟಿಕೆಟ್ ಸಿಗದ ಹಿನ್ನೆಲೆ ಎಂಎಲ್ಸಿ ಸ್ಥಾನಕ್ಕೆ ಆಯನೂರು ಮಂಜುನಾಥ್ ರಾಜಿನಾಮೆ ನೀಡಲು ನಿರ್ಧರಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಮಧ್ಯಾಹ್ನ ಸಭಾಪತಿಗಳನ್ನು ಭೇಟಿಯಾಗಿ ರಾಜೀನಾಮೆ ನೀಡುವೆ. ಹುಬ್ಬಳ್ಳಿಗೆ ತೆರಳಿ ರಾಜೀನಾಮೆ ನೀಡಲಿದ್ದೇನೆ. ನಾಳೆ ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ರಾಜೀನಾಮೆ ಸಲ್ಲಿಸಲು ಪದವೀಧರ ಕ್ಷೇತ್ರದ ಮತದಾರರ ಅನುಮತಿ ಪಡೆದಿದ್ದೇನೆ. ಅವರೆಲ್ಲ ತಮಗೆ ಬೆಂಬಲ ನೀಡುವ ವಿಶ್ವಾಸವಿದೆ ಎಂದಿದ್ದಾರೆ.