ಬೆಳಗಾವಿ, ಏ 19 (DaijiworldNews/MS): ಕಾಂಗ್ರೆಸ್ ನ ಸಂಸ್ಕೃತಿಯೂ ಲಿಂಗಾಯಿತ ವಿರೋಧಿ ಸಂಸ್ಕೃತಿಯಾಗಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿ ಯಾವ ತತ್ವ ಸಿದ್ಧಾಂತ ಮೇಲೆ ಕಾಂಗ್ರೆಸ್ ಗೆ ಹೋಗಿದ್ದಾರೆಂದು ಮತದಾರರಿಗೆ ಚೆನ್ನಾಗಿ ಗೊತ್ತಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿ ಅವರು ಬಿಜೆಪಿಯಲ್ಲಿ ಎಲ್ಲ ಹುದ್ದೆಗಳನ್ನು ಅನುಭವಿಸಿ ದೊಡ್ಡವರಾಗಿದ್ದಾರೆ. ಈಗ ಲಿಂಗಾಯತ ವಿರೋಧಿ ಸಂಸ್ಕೃತಿ ಇರುವ ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ವಾಪಸ್ ಪಡೆಯುತ್ತೇವೆ ಎಂದು ಹೇಳಿದ್ದಾರೆ. ಈಗ ಇದಕ್ಕೆ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿ ಇದಕ್ಕೆ ಉತ್ತರ ಕೊಡಬೇಕು ಎಂದು ಹೇಳಿದ್ದಾರೆ.