ಬೆಂಗಳೂರು, ಏ 20 (DaijiworldNews/MS): ಕಡೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೈಎಸ್ವಿ ದತ್ತಾ ವಿರುದ್ಧ 41 ಚೆಕ್ ಬೌನ್ಸ್ ಕೇಸ್ ದಾಖಲಾಗಿರುವ ಬಗ್ಗೆ ಚುನಾವಣಾಧಿಕಾರಿಗಳಿಗೆ ಸಲ್ಲಿಸಿದ ಪತ್ರದಲ್ಲಿ ಮಾಹಿತಿ ಬಹಿರಂಗವಾಗಿದೆ.
ಅವರು ನಾಮಪತ್ರ ಸಲ್ಲಿಸುವ ವೇಳೆ ಆಸ್ತಿ ವಿವರಗಳನ್ನು ಘೋಷಿಸಿದ್ದು, ದತ್ತಾ ಬಳಿ ಯಾವುದೇ ವಾಹನ ಇಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ದತ್ತ ಅವರು 2 ಲಕ್ಷ ನಗದು, 17.89 ಲಕ್ಷ ಮೌಲ್ಯದ ಚರಾಸ್ತಿ, 2ಕೋಟಿ 94 ಲಕ್ಷ ಸ್ಥಿರಾಸ್ತಿಯನ್ನು ಹೊಂದಿದ್ದಾರೆ.
ಇನ್ನು ಅವರ ಮೇಲೆ ಬರೊಬ್ಬರಿ 41 ಚೆಕ್ ಬೌನ್ಸ್ ಕೇಸ್ ದಾಖಲಾಗಿದ್ದು, 2014 ರಿಂದ 2023ರವರೆಗೆ 41 ಚೆಕ್ ಬೌನ್ಸ್ ಕೇಸ್ ದಾಖಲಾಗಿದ್ದು, ಶೃಂಗೇರಿ ಬಿಜೆಪಿ ಅಭ್ಯರ್ಥಿ ಜೀವರಾಜ್ ಬಳಿ 8 ಲಕ್ಷ ಸಾಲವನ್ನು ಪಡೆದುಕೊಂಡಿದ್ದಾರೆ.