ನವದೆಹಲಿ, ಏ 20 (DaijiworldNews/HR): ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ರಾಜನಾಥ್ ಸಿಂಗ್ ಅವರು ಇಂದು ದೆಹಲಿಯಲ್ಲಿ ನಡೆಯಲಿರುವ ಭಾರತೀಯ ವಾಯುಪಡೆಯ ಕಮಾಂಡರ್ಗಳ ಸಮ್ಮೇಳನದಲ್ಲಿ ಭಾಗವಹಿಸಬೇಕಿತ್ತು. ಆದರೆ ಕೊರೊನಾ ದೃಢಪಟ್ಟ ಹಿನ್ನಲೆಯಲ್ಲಿ ಈ ಕಾರ್ಯಕ್ರಮದಿಂದ ದೂರ ಉಳಿಯುತ್ತಿರುವುದಾಗಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇನ್ನು ಬುಧವಾರ ರಾಜನಾಥ್ ಸಿಂಗ್ ಅವರು ಸೇನಾ ಕಮಾಂಡರ್ಗಳ ಸಮ್ಮೇಳನದಲ್ಲಿ ಭಾಗವಹಿಸಿದ್ದು, ಈ ಸಂದರ್ಭದಲ್ಲಿ ಅವರು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಮತ್ತು ಇತರ ಹಿರಿಯ ಸೇನಾ ಅಧಿಕಾರಿಗಳೊಂದಿಗೆ ಇದ್ದರು.
ರಾಜನಾಥ್ ಸಿಂಗ್ ಅವರನ್ನು ವೈದ್ಯರ ತಂಡವು ಪರೀಕ್ಷಿಸಿದೆ ಮತ್ತು ಕೆಲವು ದಿನಗಳವರೆಗೆ ವಿಶ್ರಾಂತಿ ಪಡೆಯಲು ಶಿಫಾರಸು ಮಾಡಿದೆ ಎಂದು ವರದಿಯಾಗಿದೆ.