ಬೆಂಗಳೂರು, ಏ 20 (DaijiworldNews/HR): ಬಿಜೆಪಿ ಕಾರ್ಯಕರ್ತ, ಆರ್ಎಸ್ಎಸ್ ನಾಯಕ ಅರುಣ್ ಕುಮಾರ್ ಪುತ್ತಿಲ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ವಿಧಾನ ಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಈ ಬಗ್ಗೆ ಹೈಕಮಾಂಡ್ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಈ ಹಿಂದೆ ಬಿಜೆಪಿ ವಿರುದ್ಧ ಬಂಡಾಯವೆದ್ದ ಪಕ್ಷೇತರ ಸ್ಪರ್ಧಿ ಲಿಂಗಾಯತ ಮಾಡಾಳ್ ಮಲ್ಲಿಕಾರ್ಜುನರಿಗೆ 6 ವರ್ಷ ಪಕ್ಷದಿಂದ ಉಚ್ಚಾಟನೆ ಮಾಡಿತ್ತು, ಆದರೆ ಈಗ ಅರುಣ್ ಕುಮಾರ್ ಪುತ್ತಿಲ ವಿರುದ್ದ ಯಾಕೆ ಕ್ರಮ ಕಗೊಳ್ಳಲಿಲ್ಲ ಎಂದು ಪ್ರಶ್ನಿಸಿದೆ.
ಇನ್ನು ಪುತ್ತೂರಿನ ಪಕ್ಷೇತರ ಸ್ಪರ್ಧಿ ಆರೆಸ್ಸೆಸ್ಸಿನ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಯಾವುದೇ ಕ್ರಮವಿಲ್ಲ. ಲಿಂಗಾಯತರಿಗೆ ಸುಣ್ಣ ಆರೆಸ್ಸೆಸ್ಸಿಗರಿಗೆ ಬೆಣ್ಣೆ? ಪುತ್ತಿಲ ಮೇಲೆ ಕ್ರಮ ಕೈಗೊಳ್ಳಲು ಧೈರ್ಯ ಸಾಲದೇ? ಎಂದು ಪ್ರಶ್ನಿಸಿ ವಾಗ್ದಾಳಿ ನಡೆಸಿದೆ.
ಪುತ್ತೂರಿನಿಂದ ಈ ಬಾರಿ ಬಿಜೆಪಿಗೆ ಅರುಣ್ ಕುಮಾರ್ ಪುತ್ತಿಲ ಅವರಿಗೆ ಟಿಕೆಟ್ ಕೊಡಬೇಕೆಂಬುದು ಅನೇಕ ಕಾರ್ಯಕರ್ತರ ಆಶಯವಾಗಿತ್ತು. ಆದರೆ ಬಿಜೆಪಿ ಹೈಕಮಾಂಡ್ ಆಶಾ ತಿಮ್ಮಪ್ಪ ಅವರಿಗೆ ಟಿಕೆಟ್ ನೀಡಿದ್ದರಿಂದ ಬೇಸರಗೊಂಡ ಪುತ್ತಿಲ ಕಾರ್ಯಕರ್ತರ ಒತ್ತಾಯದ ಮೇರೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.