ಬೆಂಗಳೂರು, ಏ 22 (DaijiworldNews/MS): ಬಿಜೆಪಿಯಿಂದ ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸುವ ಹುನ್ನಾರ ನಡೆಯುತ್ತಿದೆ ಎಂದು ಡಿಕೆಶಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿ, ಸಿಎಂ ಕಚೇರಿಯಿಂದಲೇ ಹಲವು ಕಡೆ ಫೋನ್ ಮಾಡಿ ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ನನ್ನದೇ ನಾಮಪತ್ರ ತಿರಸ್ಕೃತಗೊಳ್ಳುವಂತೆ ಮಾಡಲು ಬಿಜೆಪಿ ಲೀಗಲ್ ಟೀಂ ಸಾಕಷ್ಟು ಯತ್ನ ಮಾಡಿತ್ತು ಎಂದು ಗಂಭೀರ ಆರೋಪ ಮಾಡಿದ್ದಾರೆ.
ಇನ್ನು ಕೆಲವು ಕಡೆ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿಲ್ಲದಿದ್ದರೂ ಖುದ್ದು ಸಿಎಂ ಕರೆ ಮಾಡಿ ಅದನ್ನು ಸ್ವೀಕರಿಸುವಂತೆ ಒತ್ತಾಯಿಸಿದ್ದಾರೆ. ಚುನಾವಣಾ ಆಯೋಗ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಎಂದು ಡಿಕೆಶಿ ಒತ್ತಾಯ ಮಾಡಿದ್ದಾರೆ.