ಹೊಸಪೇಟೆ, ಏ 22 (DaijiworldNews/HR): ವಿಧಾನಸಭೆ ಚುನಾವಣೆಗೆ ಬಿಜೆಪಿ ಪಟ್ಟಿ ಪ್ರಕಟವಾದ ಮೇಲೆ ಅನೇಕ ನಾಯಕರು ಪಕ್ಷ ತೊರೆಯುತ್ತಿದ್ದು, ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಇದೀಗ ಸಚಿವ ಆನಂದ್ ಸಿಂಗ್ ಸಹೋದರಿ ಕಾಂಗ್ರೆಸ್ ಸೇರಿದ್ದಾರೆ.
ರಾಜ್ಯ ಬಿಜೆಪಿ ಮಹಿಳಾ ಘಟಕದ ಉಪಾಧ್ಯಕ್ಷೆ, ಸಚಿವ ಆನಂದ್ ಸಿಂಗ್ ಸಹೋದರಿ ರಾಣಿ ಸಂಯುಕ್ತಾ ಸಿಂಗ್ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಸೇರಿದ್ದಾರೆ..
ಶುಕ್ರವಾರ ಸಂಯುಕ್ತಾ ಸಿಂಗ್ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಭೇಟಿಯಾಗಿ ಮಾತುಕತೆ ನಡೆಸಿದ್ದರು ಎಂಬ ಮಾಹಿತಿ ಲಭಿಸಿದ್ದು, ಶನಿವಾರ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಇನ್ನು ರಾಣಿ ಸಂಯುಕ್ತಾ ಸಿಂಗ್ ವಿಜಯನಗರದ ಬಿಜೆಪಿ ಟಿಕೆಟ್ಗಾಗಿ ಪ್ರಯತ್ನ ನಡೆಸಿದ್ದರು. ಹೈಕಮಾಂಡ್ ಮಟ್ಟದಲ್ಲಿ ಹೆಚ್ಚಿನ ಪ್ರಭಾವ ಹೊಂದಿದ್ದ ಅವರು ದೆಹಲಿಯಲ್ಲಿಯೂ ಟಿಕೆಟ್ಗಾಗಿ ಲಾಬಿ ನಡೆಸಿದ್ದರು. ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದರು. ಆದರೆ ಟಿಕೆಟ್ ಕೈತಪ್ಪಿತ್ತು.