ನವದೆಹಲಿ, ಮಾ25(SS): ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಆರ್ಥಿಕವಾಗಿ ಹಿಂದುಳಿದ ಶೇ.20ರಷ್ಟು ಬಡ ಕುಟುಂಬಗಳಿಗೆ ತಿಂಗಳಿಗೆ 6000 ರೂ. ಸಹಾಯಧನ ನೀಡುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.
ಭಾರತದ ಶೇ.20 ರಷ್ಟು ಅತೀ ಬಡಕುಟುಂಬದ ಫಲಾನುಭವಿಗಳಿಗೆ ಕನಿಷ್ಠ ಆದಾಯ ಖಾತ್ರಿ ಯೋಜನೆಯಡಿಯಲ್ಲಿ ವರ್ಷಕ್ಕೆ 72,000 ರೂ. ನೀಡುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
'ನಾವು ಉದ್ಯೋಗ ಖಾತ್ರಿ ಯೋಜನೆಯಲ್ಲೂ ನಾವು ಯಶಸ್ವಿಯಾದೆವು, ಹಾಗೆಯೇ ಕನಿಷ್ಠ ಆದಾಯ ಖಾತ್ರಿ ಯೋಜನೆಯಲ್ಲೂ ನಾವು ಯಶಸ್ವಿಯಾಗುತ್ತೇವೆ. ಪ್ರತಿ ಬಡವರಿಗೂ ನ್ಯಾಯ ಒದಗಿಸುವುದು ನಮ್ಮ ಉದ್ದೇಶ' ಎಂದು ಅಭಿಪ್ರಾಯಪಟ್ಟಿದ್ದಾರೆ.
ಫಲಾನುಭವಿ ಬಡವರ ಖಾತೆಗೆ ನೇರವಾಗಿ ಹಣ ಸಂದಾಯವಾಗಲಿದ್ದು, ಇದು 25 ಕೋಟಿಗೂ ಅಧಿಕ ಜನರನ್ನು ಬಡತನದಿಂದ ಮೇಲಕ್ಕೆತ್ತಲಿದೆ ಎಂದು ತಿಳಿಸಿದ್ದಾರೆ.