ಬೆಂಗಳೂರು, ಏ 24 (DaijiworldNews/HR): ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟಾಚಾರ ಎಸಗಿ ರಾಜ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದು, ಇದೀಗ ಈ ಹೇಳಿಕೆಯಿಂದಾಗಿ ಅವರು ಇಕ್ಕಟ್ಟಿನಲ್ಲಿ ಸಿಲುಕಿದಂತಾಗಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುತ್ತೀರಾ ಎಂದು ಪ್ರಶ್ನೆಗೆ ಉತ್ತರಿಸಿದ್ದ ಸಿದ್ದರಾಮಯ್ಯ, ಈಗ ಲಿಂಗಾಯತ ಮುಖ್ಯಮಂತ್ರಿಯಾಗಿರುವ ಬಸವರಾಜ ಬೊಮ್ಮಾಯಿ ಇದ್ದಾರಲ್ಲಾ. ಅವರೇ ಎಲ್ಲ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿರುವುದು ಎಂದು ಹೇಳಿದ್ದರು.
ಇನ್ನು ಈ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರಷ್ಟೇ ಅಲ್ಲದೆ, ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಹಾಗೂ ಸಂಘ ಸಂಸ್ಥೆಗಳೂ ಸಿದ್ದರಾಮಯ್ಯ ಅವರ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸಿದ್ದರಾಮಯ್ಯ ಅವರು ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ್ದರೂ, ಈ ಕುರಿತು ಸಿದ್ದರಾಮಯ್ಯ ಕ್ಷಮೆಯಾಚಿಸಬೇಕೆಂದು ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ.