ಹುಬ್ಬಳ್ಳಿ, ಏ 25 (DaijiworldNews/HR): ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಸೋಲಿನ ಹತಾಶೆಯಿಂದ ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪಕ್ಕೆ ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಭ್ರಷ್ಟ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಮಾಡಿರುವ ಆರೋಪ ರಾಜ್ಯದ ಜನತೆಗೆ ಮಾಡಿದ ಅವಮಾನವಾಗಿದೆ ಎಂದರು.
ಇನ್ನು ಜನ ಎಲ್ಲವನ್ನು ನೋಡುತ್ತಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ನೂರಕ್ಕೆ ನೂರಷ್ಟು ಖಚಿತ. ಇದನ್ನು ಅರಿತು ನನ್ನ ವಿರುದ್ಧ ವೈಯಕ್ತಿಕ ದಾಳಿಗೆ ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಸೋಲಿನ ಹತಾಶೆಯಿಂದ ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪಕ್ಕೆ ಮುಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.