ಭೋಪಾಲ್, ಏ 25 (DaijiworldNews/HR): ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ನಮೀಬಿಯಾದಿಂದ ತರಲಾಗಿದ್ದ ಎರಡು ಚೀತಾಗಳು ಮೃತಪಟ್ಟ ಹಿನ್ನೆಲೆಯಲ್ಲಿ ಚೀತಾಗಳನ್ನು ಪರ್ಯಾಯ ಸ್ಥಳಕ್ಕೆ ಸ್ಥಳಾಂತರಿಸುವಂತೆ ಕೋರಿ ಉದ್ಯಾನದ ಅಧಿಕಾರಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಸೆಪ್ಟೆಂಬರ್ನಲ್ಲಿ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಎರಡೂ ಬ್ಯಾಚ್ಗಳಲ್ಲಿ ಬಂದ 8 ಮತ್ತು 12 ಸೇರಿ ಒಟ್ಟು 20 ಚೀತಾಗಳನ್ನು ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಬಿಡಲಾಗಿತ್ತು.
ಇನ್ನು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಭಾನುವಾರ 'ಉದಯ್' ಹೆಸರಿನ ಗಂಡು ಚೀತಾ ಮೃತಪಟ್ಟಿತ್ತು.
ಈ ಸ್ಥಳದ ಸಮಸ್ಯೆ ಇದೆ. ಮುಖ್ಯವಾಗಿ ಲಾಜಿಸ್ಟಿಕ್ಸ್ ಸಮಸ್ಯೆ ಇದೆ. ಒಂದು ಚೀತಾ ಕುರಿತು ದಿನದ 24 ಗಂಟೆ ಗಮನಹರಿಸಲು 9 ಸಿಬ್ಬಂದಿ ಬೇಕು. ಆದರೆ ಇಲ್ಲಿ ಸಿಬ್ಬಂದಿ ಕೊರತೆ ಇದೆ ಎಂದು ಉದ್ಯಾನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.