ಬೆಂಗಳೂರು, ಏ 27 (DaijiworldNews/MS): ಡಿ ಕೆ ಶಿವಕುಮಾರ್ ರಕ್ತ ಯಾರಿಗೂ ಪ್ರಯೋಜನ ಇಲ್ಲ,ಅವರ ಅಪೇಕ್ಷೆವನ್ನು ನಾವು ನೆರವೇರಿಸುತ್ತೇವೆ. ಇನ್ನೂ ಎರಡು ಮೂರು ದಿನದಲ್ಲಿ ರಾಜ್ಯದ ಚುನಾವಣಾ ಚಿತ್ರಣ ಬದಲಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತಾದೆ ನಾನು ರಕ್ತದಲ್ಲಿ ಬರೆದುಕೊಡುತ್ತೇನೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಚುನಾವಣೆಯಲ್ಲಿ ಜನರಿಗೆ ಮೋಸ ಮಾಡುವ ತಂತ್ರ. 150 ಸ್ಥಾನ ಯಾರಿಗೆ ಕೊಡಬೇಕು ಎಂದು ಜನ ತೀರ್ಮಾನ ಮಾಡುತ್ತಾರೆ. ಡಿಕೆ ಶಿವಕುಮಾರ್ ರಕ್ತ ಯಾರಿಗೂ ಪ್ರಯೋಜನ ಆಗುವುದಿಲ್ಲ. ನಮಗೆ ಜನರ ಮೇಲೆ ವಿಶ್ವಾಸ ಇದೆ ಎಂದರು
ನಿನ್ನೆ ಮೈಸೂರಿನಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 40 ಸ್ಥಾನಕ್ಕೆ ನಿಲ್ಲುತ್ತದೆ. ಕಾಂಗ್ರೆಸ್ 150 ಸ್ಥಾನಕ್ಕೆ ಬರುತ್ತದೆ. ಬಿಜೆಪಿಯಿಂದ ಯಾರಿಗೆ ಅನುಕೂಲ ಆಗಿದೆ? ರೈತರು, ವರ್ತಕರು, ಯುವಕರಿಗೆ ಮೋಸ ಮಾಡಿದೆ. ಆದ್ದರಿಂದ 15 ದಿನದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತದೆ. ಇದನ್ನು ನಾನು ನನ್ನ ರಕ್ತದಲ್ಲಿ ಬರೆದು ಕೊಡುತ್ತೇನೆ ಎಂದು ಹೇಳಿದ್ದರು.