ನವದೆಹಲಿ, ಏ 29 (DaijiworldNews/MS): "ನಾನು ನಿರಪರಾಧಿಯಾಗಿದ್ದು, ಹುದ್ದೆಗೆ ರಾಜೀನಾಮೆ ನೀಡುವುದಿಲ್ಲ"ಎಂದು ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಹೇಳಿದ್ದಾರೆ.
ಸುಪ್ರಿಂ ಕೋರ್ಟ್ ನ ಆದೇಶದಂತೆ ಎರಡು ಎಫ್.ಐ.ಆರ್ ದಾಖಲಾದ ಬಳಿಕ ಪ್ರತಿಕ್ರಿಯಿಸಿ 'ನನಗೆ ಎಫ್.ಐ.ಆರ್ ಪ್ರತಿ ಇನ್ನೂ ಬಂದಿಲ್ಲ. ಈ ಹುದ್ದೆ ಸಿಕ್ಕಿದ್ದು ಸಾರ್ವಜನಿಕರಿಂದ ಹೊರತು ವಿನೇಶ್ ಫೋಗಟ್ ಅವರಿಂದಲ್ಲ. ರಾಜೀನಾಮೆ ದೊಡ್ಡ ವಿಷಯವಲ್ಲ. ನಾನು ಸಂಪೂರ್ಣ ನಿರಪರಾಧಿ. ಈ ವಿಚಾರದ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಆದಷ್ಟು ಬೇಗ ಈ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಬೇಕು ಮತ್ತುಅದಕ್ಕೆ ಸಂಪೂರ್ಣ ಸಹಕರಿಸುವುದಾಗಿ' ಹೇಳಿದ್ದಾರೆ.
ಸುಪ್ರಿಂ ಕೋರ್ಟ್ ಆದೇಶದಂತೆ ಮಹಿಳಾ ಕುಸ್ತಿಪಟುಗಳು ನೀಡಿದ ದೂರಿನ ಮೇರೆಗೆ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲಿಸಲಾಗಿದೆ ಮೊದಲ ಎಫ್ಐಆರ್ ಅಪ್ರಾಪ್ತ ವಯಸ್ಕರಿಂದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ದಾಖಲಾಗಿರುವ ಆರೋಪಗಳಿಗೆ ಸಂಬಂಧಿಸಿದೆ.
ವಯಸ್ಕ ಮಹಿಳಾ ಕುಸ್ತಿಪಟುಗಳ ದೂರುಗಳ ಬಗ್ಗೆ ಸಮಗ್ರ ತನಿಖೆಗಾಗಿ ಎರಡನೇ ಎಫ್ಐಆರ್ ದಾಖಲಿಸಲಾಗಿದೆ, ಸಂಬಂಧಿತ ಐಪಿಸಿ ಸೆಕ್ಷನ್ಗಳ ಅಡಿಯಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಎರಡೂ ಎಫ್ಐಆರ್ಗಳ ತನಿಖೆಯನ್ನು ಸೂಕ್ತವಾಗಿ ಮಾಡಲಾಗುವುದು ಎಂದು ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.