ನವದೆಹಲಿ, ಏ 01 (DaijiworldNews/HR): ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ಕಮರ್ಷಿಯಲ್ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 171.50 ರೂ.ಗಳಷ್ಟು ಕಡಿತಗೊಳಿಸಿದೆ.
ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 171.50 ರೂ.ಗಳಷ್ಟು ಇಳಿಕೆಯಾಗಿದ್ದು, ದೆಹಲಿಯಲ್ಲಿ 19 ಕೆಜಿ ಎಲ್ಪಿಜಿ ಸಿಲಿಂಡರ್ನ ಬೆಲೆ 1,856.50ರೂಪಾಯಿ ಆಗಿದೆ.
ಕಳೆದ ತಿಂಗಳು ಕೂಡ ಅವುಗಳ ಬೆಲೆ ಪ್ರತಿ ಯೂನಿಟ್ಗೆ 91.50 ರೂಪಾಯಿ ಇಳಿಕೆಯಾಗಿದ್ದು, ಪ್ರತಿ ಯೂನಿಟ್ಗೆ 2028 ರೂಪಾಯಿ ಇತ್ತು.
ಇನ್ನು ಇದೀಗ ಮತ್ತಷ್ಟು ಕಡಿಮೆಯಾಗಿದ್ದು, ಗೃಹ ಬಳಕೆ ಸಿಲಿಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.