ನವದೆಹಲಿ, ಮೇ 1 (DaijiworldNews/MS): 2023ರ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ ವಿರುದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟಾಂಗ್ ನೀಡಿದ್ದಾರೆ.
ಬಿಜೆಪಿಯವರು ತಮ್ಮ ಪ್ರಣಾಳಿಕೆಗೂ ಮೊದಲು ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ. ಕಳೆದ ಚುನಾವಣೆ ವೇಳೆ ಘೋಷಿಸಿದ್ದ ಭರವಸೆಗಳ ಪೈಕಿ ಶೇ.90ರಷ್ಟನ್ನು ಈಡೇರಿಸಿಲ್ಲ. ಬಿಜೆಪಿ ನಾಯಕರು ತಾವು ಈ ಹಿಂದೆ ನೀಡಿದ್ದ ಭರವಸೆಗಳಿಗೆ ತಕ್ಕಂತೆ ನಡೆದುಕೊಂಡಿಲ್ಲ. ಬಿಜೆಪಿ ಎಂದರೆ ದೇಶದ್ರೋಹಿಗಳು ಎಂದು ಕಿಡಿಕಾರಿದ್ದಾರೆ
ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ನಿತ್ಯ ಅರ್ಧ ಲೀಟರ್ ಹಾಲು, 5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ, ಹಬ್ಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್ ನೀಡುವ ಯೋಜನೆ ಮೇಲ್ನೋಟಕ್ಕೆ ಸರಿ ಕಂಡರೂ ಅದಕ್ಕೆ ಬೇಕಾಗಿರುವ ಸಂಪನ್ಮೂಲಗಳ ಕ್ರೌಡಿಕರಣ ಹೇಗೆ ಮಾಡುತ್ತೀರ ಅದನ್ನು ಮೊದಲು ಹೇಳಬೇಕು. ಬಿಜೆಪಿಯವರು ನಮ್ಮ ಪ್ರಣಾಳಿಕೆಯನ್ನು ಲೆಕ್ಕಾಚಾರವಿಲ್ಲದ ಪ್ರಣಾಳಿಕೆ ಎನ್ನುತ್ತಿದ್ದರು. ಈಗ ಬಿಜೆಪಿಯವರು ತಮ್ಮ ಪ್ರಣಾಳಿಕೆ ಜಾರಿಗೆ ಯಾವ ಲೆಕ್ಕಾಚಾರ ಹೊಂದಿದ್ದಾರೆ ಎಂಬುದನ್ನು ಹೇಳಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.