ಕಲಬುರಗಿ, ಮೇ 04 (DaijiworldNews/MS):ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಮೇಲಿದ್ದ ಕಳ್ಳತನ ಆರೋಪ ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ಚಿತ್ತಾಪುರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಡೆಸಬೇಕಿದ್ದ ಪ್ರಚಾರ ರದ್ದಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದಲ್ಲಿ ಮೇ 6 ರಂದು ಪಿಎಂ ಮೋದಿ ಭಾಗವಹಿಸಬೇಕಾಗಿದ್ದ ಸಾರ್ವಜನಿಕ ಸಭೆಯನ್ನು ರದ್ದುಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಮಣಿಕಂಠ ರಾಥೋಡ್ 40 ಪ್ರಕರಣಗಳು ಇರುವುದನ್ನ ನಾಮಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದರಲ್ಲಿ ಬಹುತೇಕ ಪ್ರಕರಣಗಳು ಅಕ್ಕಿ, ಹಾಲಿನ ಪುಡಿ ಅಕ್ರಮ ಸಾಗಾಟದ ಪ್ರಕರಣಗಳಾಗಿವೆ . ಅಂಗನವಾಡಿ ಮಕ್ಕಳ ಹಾಲಿನ ಪುಡಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದ ಪ್ರಕರಣದಲ್ಲಿ ಮಣಿಕಂಠ ರಾಠೋಡ್ ಅವರು ಶಿಕ್ಷೆಗೆ ಗುರಿಯಾಗಿದ್ದು, ಪ್ರಕರಣ ಸಂಬಂಧ ರಾಠೋಡ್ ಅವರು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.
ಈ ಪರಿಸ್ಥಿತಿಯಲ್ಲಿ ಮಣಿಕಂಠನ ಅವರ ಮೋದಿಯವರು ಪ್ರಚಾರ ನಡೆಸಿದ್ದೇ ಆದರೆ, ಬಿಜೆಪಿ ಮುಜುಗರಕ್ಕೊಳಗಾಗಬೇಕಾಗುವ ಸಾಧ್ಯತೆಗಳಿವೆ. ಹೀಗಾಗಿ ಮೋದಿಯವರು ನಡೆಸಬೇಕಿದ್ದ ಪ್ರಚಾರ ರದ್ದಾಗಿದೆ.