ಮಣಿಪುರ, ಮೇ 05 (DaijiworldNews/KH): ರಾಜ್ಯಾದ್ಯಂತ ಕುಕಿ ಬುಡಕಟ್ಟು ಜನಾಂಗ ಮತ್ತು ಬಹುಸಂಖ್ಯಾತ ಮೈತಿ ಸಮುದಾಯದ ನಡುವಿನ ಹಿಂಸಾಚಾರ ಜೋರಾಗಿದ್ದು, ಪರಿಸ್ಥಿತಿ ಕೈಮೀರಿದರೆ ಇದನ್ನು ಕಂಡಲ್ಲಿ ಗುಂಡು ಹಾರಿಸುವಂತೆ ಮಣಿಪುರ ಸರ್ಕಾರ ಆದೇಶಿಸಿದೆ.
ಮಣಿಪುರ ಗೃಹ ಇಲಾಖೆ ಸೂಚನೆ ನೀಡಿದ ಪ್ರಕಾರ 1973ರ CRPC ಅಡಿಯಲ್ಲಿ ಈ ಆದೇಶ ಹೊರಡಿಸಲಾಗಿದ್ದು, ಎಲ್ಲಾ ರೀತಿಯ ಮನವೊಲಿಕೆಗೂ ಹಾಗೂ ಎಚ್ಚರಿಕೆಯ ನಡುವೆಯೂ ಬಗ್ಗದೇ ಹೋದರೆ, ಪರಿಸ್ಥಿತಿ ಕೈಮೀರಿದರೆ ಕಂಡಲ್ಲಿ ಗುಂಡು ಹಾರಿಸುವಂತೆ ಆದೇಶಕ್ಕೆ ರಾಜ್ಯಪಾಲರು ಸಹಿ ಮಾಡಿದ್ದಾರೆ.
ಅಮಿತ್ ಶಾ ಜೊತೆಗೆ ಮಾತುಕತೆ ನಡೆಸಿದ ಬಳಿಕ ಸಿಎಂ ಬಿರೇನ್ ಸಿಂಗ್ ವಿಡಿಯೋ ಸಂದೇಶ ನೀಡಿದ್ದ ಬಳಿಕ , ರಾಜ್ಯದ ಜನರು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಂತೆ ಮನವಿ ಮಾಡಿದ್ದು,ಸಮಾಜದ ಎರಡು ವರ್ಗಗಳ ನಡುವಿನ ತಪ್ಪು ತಿಳುವಳಿಕೆಯಿಂದ ಈ ಘಟನೆಗಳು ನಡೆದಿವೆ ಎಂದರು.
ಗುರುವಾರ ಬೆಳಿಗ್ಗೆ, ಸುಮಾರು 500 ಸಿಬ್ಬಂದಿಯನ್ನು ಮಣಿಪುರಕ್ಕೆ ಕೇಂದ್ರ ಸರ್ಕಾರ ರವಾನಿಸಿತ್ತು.
ಈ ಘಟನೆಯಿಂದ 10 ಮಂದಿ ಸಾವನ್ನಪ್ಪಿದ್ದು, ಇಲ್ಲಿಯವರೆಗೆ, 9,000 ಜನರನ್ನು ಹಿಂಸಾಚಾರ ಪೀಡಿತ ಪ್ರದೇಶಗಳಿಂದ ಭದ್ರತಾ ಪಡೆಗಳು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿದೆ.
ಚುರಾಚಂದ್ಪುರದಲ್ಲಿ ಸುಮಾರು 5,000 ಜನರು, ಇಂಫಾಲ್ ಕಣಿವೆಯಲ್ಲಿ 2,000 ಜನರನ್ನು ಮತ್ತು ತೆನುಗೋಪಾಲ್ ಜಿಲ್ಲೆಯ ಗಡಿ ಪಟ್ಟಣವಾದ ಮೊರೆಹ್ನಲ್ಲಿ 2,000 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ರಕ್ಷಣಾ ವಕ್ತಾರರು ಮಾಹಿತಿ ನೀಡಿದ್ದಾರೆ.
ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪರಿಸ್ಥಿತಿ ಹತೋಟಿಯಲ್ಲಿಡಲು ಧ್ವಜ ಮೆರವಣಿಗೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.