ಬೆಂಗಳೂರು, ಮೇ 07 (DaijiworldNews/SM): ವಿಧಾನಸಭೆ ಚುನಾವಣೆಗೆ ಅಬ್ಬರದ ಪ್ರಚಾರ ನಡೆಯುತ್ತಿದ್ದು, ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಅಬ್ಬರದ ಪ್ರಚಾರ ಕಾರ್ಯ ಮುಂದುವರೆದಿದೆ. ರಾಜ್ಯ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಾಳೆ(ಮೇ 8) ಸಂಜೆ 6ಗಂಟೆಗೆ ತೆರೆ ಬೀಳಲಿದ್ದು, ಕೊನೆಯ ಕ್ಷಣದಲ್ಲಿ ಮನತದಾರರ ಮನಗೆಲ್ಲಲು ರಾಜಕೀಯ ಪಕ್ಷಗಳ ನಾಯಕರು ಅಬ್ಬರದ ಪ್ರಚಾರ ನಡೆಸಿದರು.
ಕಾಂಗ್ರೆಸ್ ಹಾಗೂ ಬಿಜೆಪಿಯ ಪ್ರಮುಖ ಸ್ಟಾರ್ ಪ್ರಚಾರಕರು ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಘಟಾನುಘಟಿ ನಾಯಕರು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರೆ, ಅತ್ತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಮುಖಂಡ ರಾಹುಲ್ ಗಾಂಧಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ವಿವಿಧೆಡೆಗಳಲ್ಲಿ ಮತಯಾಚನೆ ಮಾಡಿದರು.
ನಾಳೆ(ಮೇ 8) ಸಂಜೆ 6ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಕ್ಷೇತ್ರದಲ್ಲಿ ಮತದಾನದ ಹಕ್ಕು ಹೊಂದಿಲ್ಲದವರು, ಸ್ಟಾರ್ ಪ್ರಚಾರಕರೂ ಕ್ಷೇತ್ರ ಬಿಟ್ಟು ತೆರಳಲು ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಒಂದು ವೇಳೆ ನಿಯಮ ಉಲ್ಲಂಘಿಸಿದವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದೆ. ಮತದಾನ ಮುಕ್ತಾಯದ 48 ಗಂಟೆಗೂ ಮೊದಲು ಚುನಾವಣಾ ಬಹಿರಂಗ ಪ್ರಚಾರ ಅಂತ್ಯವಾಗಲಿದೆ.