ಬೆಂಗಳೂರು, ಮೇ 08 (DaijiworldNews/HR): ಮಹಿಳೆಯರಿಗೆ 2 ಸಾವಿರ, 200 ಯೂನಿಟ್ ವಿದ್ಯುತ್ ಉಚಿತ, 10 ಕೆಜಿ ಅಕ್ಕಿ ಉಚಿತ, ಅಂಗನವಾಡಿ ಕಾರ್ಯಕರ್ತರಿಗೆ 15 ಸಾವಿರ ವೇತನ ಗ್ಯಾರಂಟಿಗಳನ್ನು ಘೋಷಿಸಿರುವ ಕಾಂಗ್ರೆಸ್ ಪಕ್ಷ ಇದೀಗ ಹೆಣ್ಮಕ್ಕಳಿಗಾಗಿ ತಾಯಿ, ಮಗು ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಘೋಷಿಸಿದೆ.
ಈ ಕುರಿತು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಹೆಣ್ಣು ಮಕ್ಕಳಿಗಾಗಿ ಪ್ರತಿ ತಾಲೂಕಿನಲ್ಲೂ ತಾಯಿ-ಮಗು ಆಸ್ಪತ್ರೆಯನ್ನ ಹೊಸದಾಗಿ ನಿರ್ಮಿಸಿ, ಉಚಿತವಾಗಿ ಹೆರಿಗೆ ಸೌಲಭ್ಯ ಸಿಗುವಂತೆ ಮಾಡುತ್ತೇವೆ. ಮಕ್ಕಳಿಗೆ ಗ್ರಾಮೀಣ ಭಾಗದಲ್ಲೇ ಉತ್ತಮ ಶಿಕ್ಷಣ ವ್ಯವಸ್ಥೆ ಕಲ್ಪಿಸಿ, ಬೆಂಗಳೂರಿನಂತಹ ನಗರಗಳಿಗೆ ಬರೋದು ತಪ್ಪಿಸುತ್ತೇವೆ ಎಂದರು.
ಇನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಕೇಂದ್ರದ ಯೋಜನೆಗಳಿಗೆ ಬ್ರೇಕ್ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಮಿಸ್ಟರ್ ನಡ್ಡಾಜಿ, ಡೋಂಟ್ ತ್ರೆಟನ್ ಅಸ್, ಏನ್ ಹೆದರಿಸ್ತೀರಾ? ಕೇಂದ್ರದ ಯೋಜನೆಗಳನ್ನು ನಿಲ್ಲಿಸ್ತೇವೆ ಅಂತ ಹೆದರಿಸ್ತೀರಾ? ಇಂತಹ ಬ್ಲ್ಯಾಕ್ಮೇಲ್ಗೆ ಹೆದರಲ್ಲ ಎಂದಿದ್ದಾರೆ.
ಕಾಂಗ್ರೆಸ್ ಸರ್ಕಾರವು ಈಗಾಗಲೇ ಮಹಿಳೆಯರಿಗೆ 2 ಸಾವಿರ, 200 ಯೂನಿಟ್ ವಿದ್ಯುತ್ ಉಚಿತ, 10 ಕೆಜಿ ಅಕ್ಕಿ ಉಚಿತ, ಅಂಗನವಾಡಿ ಕಾರ್ಯಕರ್ತರಿಗೆ 15 ಸಾವಿರ ವೇತನ ಗ್ಯಾರಂಟಿಗಳನ್ನು ಘೋಷಿಸಿದ್ದು, ಇದೀಗ ಹೆಣ್ಣು ಮಕ್ಕಳಿಗಾಗಿ ಪ್ರತಿ ತಾಲೂಕಿನಲ್ಲೂ ತಾಯಿ-ಮಗು ಆಸ್ಪತ್ರೆಯನನ್ನು ನಿರ್ಮಿಸುವುದಾಗಿ ಘೋಷಿಸಿದ್ದಾರೆ.