ನವದೆಹಲಿ, ಮೇ 08 (DaijiworldNews/HR): ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಕರ್ಫ್ಯೂ ಜಾರಿಯಲ್ಲಿರುವುದರಿಂದ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಶಾಂತಿ ಕಾಪಾಡುವಂತೆ ಜನತೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಮೈತಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ-ಸ್ಥಾನಮಾನದ ವಿಷಯದಲ್ಲಿ ನಿರ್ಧಾರ ತೆಗೆದುಕೊಳ್ಳುವ ಮೊದಲು ಮಣಿಪುರ ಸರ್ಕಾರವು ಎಲ್ಲಾ ಮಧ್ಯಸ್ಥಗಾರರನ್ನು ಸಂಪರ್ಕಿಸುತ್ತದೆ ಎಂದು ಭರವಸೆ ನೀಡಿದರು.
ಇನ್ನು ನ್ಯಾಯಾಲಯವು ಆದೇಶ ನೀಡಿದ್ದು, ಈ ಬಗ್ಗೆ ಎಲ್ಲಾ ಸಂಬಂಧಿತ ಪಾಲುದಾರರೊಂದಿಗೆ ಚರ್ಚಿಸಲಾಗುವುದು ಮತ್ತು ಸಮಾಲೋಚನೆಯ ನಂತರ ಮಣಿಪುರ ಸರ್ಕಾರವು ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ಯಾರೂ ಭಯಪಡುವ ಅಗತ್ಯವಿಲ್ಲ ಎಂದಿದ್ದಾರೆ.
ಹಿಂಸಾಚಾರದಲ್ಲಿ 54 ಮಂದಿ ಸಾವನ್ನಪ್ಪಿದ್ದು, ಸಾವಿರಾರು ಮಂದಿಯನ್ನು ಸಂಘರ್ಷ ಪೀಡಿತ ಪ್ರದೇಶಗಳಿಂದ ಸ್ಥಳಾಂತರಿಸಲಾಗಿದೆ.