ಬೆಂಗಳೂರು, ಮೇ 08 (DaijiworldNews/HR): ವಿಧಾನಸಭಾ ಚುನಾವಣೆ ಮತ್ತು ಮತ ಎಣಿಕೆ ಹಿನ್ನೆಲೆಯಲ್ಲಿ ನಾಲ್ಕು ದಿನ ಕಾಲ ಮದ್ಯ ಮಾರಾಟ ಬಂದ್ ಆಗಲಿದೆ.
ಮೇ 10ರಂದು ನಡೆಯಲಿರುವ ಚುನಾವಣೆ ಹಿನ್ನೆಲೆ ಸೋಮವಾರ ಸಂಜೆಯಿಂದಲೇ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ ಆಗಲಿದೆ.
8, 9, 10 ಹಾಗೂ ಚುನಾವಣೆ ಫಲಿತಾಂಶ ದಿನವಾದ ಮೇ 13 ರಂದು ಕೂಡಾ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ ಆಗಲಿದ್ದು, ನಾಲ್ಕು ದಿನಗಳ ಕಾಲ ಮದ್ಯ ಮಾರಾಟ ಬಂದ್ಗೆ ರಾಜ್ಯ ಸರ್ಕಾರಕ್ಕೆ ಆಯೋಗ ಸೂಚನೆ ನೀಡಿದೆ.
ಇನ್ನು ಸೋಮವಾರ ಸಂಜೆ 5 ಗಂಟೆಯಿಂದ ಮದ್ಯ ಮಾರಾಟ ಮತ್ತು ಸಾಗಣೆಗೆ ನಿಷೇಧ ಜಾರಿಯಾಗಲಿದ್ದು, ಮತದಾನ ಮುಕ್ತಾಯಕ್ಕೆ ನಿಗದಿಪಡಿಸಿದ ದಿನಾಂಕದ 48 ಗಂಟೆಗಳ ಮುನ್ನ ಅವಧಿಯಲ್ಲಿ ಅಂದರೆ, ಮೇ 8 ರ ಸಂಜೆ 5 ರಿಂದ 10ರ ಮಧ್ಯರಾತ್ರಿ 12 ಗಂಟೆವರೆಗೆ ಎಲ್ಲ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ಮಳಿಗೆಗಳಲ್ಲಿ ಮದ್ಯ ಮಾರಾಟ ಮತ್ತು ಪೂರೈಕೆ ನಿಷೇಧಿಸಲಾಗಿದೆ.