ಗುಜರಾತ್,ಮೇ8(Daijiworld News/KH):ಬಿಜೆಪಿ ಕಾರ್ಯಕರ್ತನನ್ನು ದುಷ್ಕರ್ಮಿಗಳ ಗುಂಪೊಂದು ಗುಂಡಿಕ್ಕಿ ಹತ್ಯೆಗೈದ ಘಟನೆ ಗುಜರಾತ್ ನ ವಲ್ಸದ್ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಶೈಲೇಶ್ ಪಟೇಲ್ ಬಿಜೆಪಿಯ ವಾಪಿ ತಾಲೂಕು ಘಟಕದ ಉಪಾಧ್ಯಕ್ಷರಾಗಿದ್ದು, ದೇವಸ್ಥಾನಕ್ಕೆ ಪೂಜೆಗೆಂದು ಬಂದಿದ್ದ ಪತ್ನಿಯನ್ನು ಕರೆದೊಯ್ಯಲು ಬಂದ ಶೈಲೇಶ್ ಪಟೇಲ್ ಅವರನ್ನು ಹತ್ಯೆ ಮಾಡಲಾಗಿದೆ.
ತನ್ನ ಪತ್ನಿ ನಯಾಬೆನ್ ರಾಟಾ ರಸ್ತೆಯಲ್ಲಿರುವ ಮಹಾದೇವ ದೇವಸ್ಥಾನಕ್ಕೆ ಪೂಜೆಗೆಂದು ತೆರಳಿದ್ದು, ಶೈಲೇಶ್ ತಮ್ಮ ಎಸ್ಯುವಿ ಕಾರಿನಲ್ಲಿ ದೇವಸ್ಥಾನದ ಹೊರಗೆ ಪತ್ನಿಗಾಗಿ ಕಾಯುತ್ತಿದ್ದರು, ಆಗ ಬೈಕಿನಲ್ಲಿ ದುಷ್ಕರ್ಮಿಗಳು ಶೈಲೇಶ್ ಎದೆಗೆ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಕೂಡಲೇ ಸ್ಥಳೀಯರು ಶೈಲೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಘಟನೆ ಕುರಿತು ಶೈಲೇಶ್ ಪತ್ನಿ ಯೊಡನೆ ಕೇಳಿದಾಗ ಕೆಲವು ಪರಿಚಿತ ವ್ಯಕ್ತಿಗಳೊಂದಿಗಿನ ಹಳೆಯ ಜಗಳ ಕೊಲೆಗೆ ಕಾರಣವಾಗಿರಬಹುದು ಎಂದು ಆರೋಪಿಸಿದ್ದಾರೆ.ಆರೋಪಿಗಳ ಪತ್ತೆಗೆ ಪೊಲೀಸರು ಗಡಿ ಭಾಗದಲ್ಲಿ ತಪಾಸಣೆ ನಡೆಸುತ್ತಿದ್ದಾರೆ.