ನವದೆಹಲಿ, ಮೇ 09 (DaijiworldNews/MS): ಕರ್ನಾಟಕ ಸರ್ಕಾರ ಮುಸ್ಲಿಂ ಸಮುದಾಯದ 4% ಮೀಸಲಾತಿಯನ್ನು ರದ್ದುಗೊಳಿಸಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀ ಕೋರ್ಟ್ ವಿಚಾರಣೆಯನ್ನು ಮೇ 25ಕ್ಕೆ ಮುಂದೂಡಿದೆ.
ನ್ಯಾಯಾಮೂರ್ತಿಗಳಾದ ಕೆ.ಎಂ ಜೋಸೆಫ್ ಹಾಗೂ ಬಿ.ವಿ ನಾಗರತ್ನ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆದು , ಮುಂದಿನ ವಿಚಾರಣೆ ಮೇ 25ಕ್ಕೆ ಮುಂದೂಡಲಾಯಿತು.
ಇದೇ ವೇಳೆ ಕೇಂದ್ರ ಗೃಹಸಚಿವ ಅಮಿತ್ ಶಾ ಮತ್ತಿತರರು ನೀಡುತ್ತಿರುವ ಬಹಿರಂಗ ಹೇಳಿಕೆಗಳ ಬಗ್ಗೆ ಸುಪ್ರೀಂ ಕೋರ್ಟ್ ಕೆಂಡಾಮಂಡಲವಾಗಿದ್ದು ಪ್ರಕರಣ ನ್ಯಾಯಾಲಯದ ಮುಂದಿರುವಾಗ ಹೇಳಿಕೆಗಳನ್ನು ನೀಡಿದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.