ಕಲಬುರಗಿ , ಮೇ 09 (DaijiworldNews/MS): ಮತದಾನಕ್ಕೆ ಇನ್ನು ಗಂಟೆಗಳಷ್ಟೇ ಬಾಕಿ ಉಳಿದಿದ್ದು, ಚುನಾವಣಾ ಅಕ್ರಮಗಳ ಮೇಲೆ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಹೀಗಿರುವಾಗ ಜಿಲ್ಲಾಧಿಕಾರಿಯೋರ್ವರು ಹಣ ಹಂಚಲು ಮುಂದಾದ ವ್ಯಕ್ತಿಗಳನ್ನು ಹಿಡಿದಿರುವ ಘಟನೆ ನಡೆದಿದೆ.
ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಸಂಗಮೇಶ್ವರ ಕಾಲೊನಿಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಹಣ ಹಂಚಲು ಮುಂದಾಗಿದ್ದ ಇಬ್ಬರು ವ್ಯಕ್ತಿಗಳನ್ನು ಅಲ್ಲಿನ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಬೆನ್ನಟ್ಟಿ ಹಿಡಿದಿದ್ದಾರೆ.
ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಕಡೆಯವರು ಎನ್ನಲಾದ ಇಬ್ಬರು ಕಳೆದ ರಾತ್ರಿ 1 ಗಂಟೆಗೆ ಬೀದಿ ದೀಪ ಬಂದ್ ಮಾಡಿ ಹಣ ಹಂಚಲು ಮುಂದಾಗಿದ್ದರು ಎಂದು ಕೈ ಕಾರ್ಯಕರ್ತರು ದೂರು ನೀಡಿದ್ದರು. ಈ ಹಿನ್ನಲೆ ಪೊಲೀಸರ ಗಮನಕ್ಕೂ ತರದೇ ಜಿಲ್ಲಾಧಿಕಾರಿ ತಕ್ಷಣ ಧಾವಿಸಿದ್ದು ಇದರಿಂದ ಗಾಬರಿಕೊಂಡ ಕಾರು ಚಲಾಯಿಸಿ ಪರಾರಿಯಾಗುತ್ತಿದ್ದ ವೇಳೆ ಜಿಲ್ಲಾಧಿಕಾರಿ ಬೆನ್ನಟ್ಟಿ ತಡೆದಿದ್ದಾರೆ ಈ ಕುರಿತ ವಿಡಿಯೋ ಕೂಡ ಈಗ ವೈರಲ್ ಆಗಿದ್ದು, ಚುನಾವಣಾಧಿಕಾರಿಯ ಈ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.