ಬೆಂಗಳೂರು, ಮೇ 09 (DaijiworldNews/HR): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಪರಿಷ್ಕೃತ ದಿನಾಂಕ ಪ್ರಕಟವಾಗಿದೆ.
ಸಿಇಟಿ ಕನ್ನಡ ಭಾಷಾ ಪರೀಕ್ಷೆ ಮೇ 22ರಂದು ಆಯೋಜನೆಯಾದ ಹಿನ್ನಲೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪರಿಷ್ಕೃತ ದಿನಾಂಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮೇ 23ರಿಂದ ಜೂನ್ 2ರವರೆಗೆ ಪರೀಕ್ಷೆಗಳು ನಡೆಯಲಿವೆ.
ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2023 ವೇಳಾಪಟ್ಟಿ
23 ಮೇ -ಕನ್ನಡ, ಅರಾಬಿಕ್
24 ಮೇ -ಐಚ್ಚಿಕ ಕನ್ನಡ, ರಸಾಯನ ಶಾಸ್ತ್ರ, ಮೂಲ ಗಣಿತ
25 ಮೇ - ಇಂಗ್ಲಿಷ್, ಮಾಹಿತಿ ತಂತ್ರಜ್ಞಾನ, ರೀಟೈಲ್ ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ನೆಸ್
26 ಮೇ - ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
27 ಮೇ - ಇತಿಹಾಸ, ಸಂಖ್ಯಾಶಾಸ್ತ್ರ
29 ಮೇ - ಹಿಂದಿ, ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
30 ಮೇ - ಭೂಗೋಳಿಕಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
31 ಮೇ - ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
1 ಜೂನ್ - ರಾಜ್ಯ ಶಾಸ್ತ್ರ, ಗಣಿತ ಶಾಸ್ತ್ರ
2 ಜೂನ್ - ತರ್ಕ ಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
3 ಜೂನ್ -ಅರ್ಥಶಾಸ್ತ್ರ, ಜೀವಶಾಸ್ತ್ರ