ಹಾವೇರಿ, ಮೇ 10 (DaijiworldNews/HR): ಪ್ರಜಾಪ್ರಭುತ್ವದ ಗೆಲುವಿಗಾಗಿ ಎಲ್ಲರೂ ಮತದಾನ ಮಾಡಿ. ನಾವೆಲ್ಲರೂ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗಿ ಮತದಾನ ಮಾಡಿದ್ದೇವೆ. ನೀವು ಕೂಡ ಮನೆಗಳಿಂದ ಹೊರಬಂದು ನಿಮ್ಮ ಹಕ್ಕು ಚಲಾಯಿಸಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನಾಡಿನ ಉದ್ದಗಲಕ್ಕೂ ನಾನು ಸಂಚರಿಸಿದ್ದು, ಈ ಬಾರಿ ಜನತೆಯ ಒಲವು ಭಾರತೀಯ ಜನತಾ ಪಕ್ಷದ ಪರವಿದ್ದು, ಜನತೆ ಮತ್ತೊಮ್ಮೆ ಡಬಲ್ ಇಂಜಿನ್ ಸರ್ಕಾರಕ್ಕೆ ಆಶೀರ್ವದಿಸುತ್ತಾರೆಂಬ ಸಂಪೂರ್ಣ ವಿಶ್ವಾಸ ನನ್ನದಾಗಿದೆ ಎಂದರು.
ಇನ್ನು ಇಂದು ನನ್ನ ತವರು ಶಿಗ್ಗಾಂವಿಯ ಸರ್ಕಾರಿ ಶಾಲೆಯಲ್ಲಿ ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗಿ, ನನ್ನ ಕುಟುಂಬ ಸದಸ್ಯರೊಂದಿಗೆ ಮತ ಚಲಾಯಿಸಿದೆನು. ಪ್ರತಿಯೊಬ್ಬರೂ ತಪ್ಪದೇ ಮತ ಚಲಾಯಿಸಬೇಕೆಂದು ಈ ಮೂಲಕ ವಿನಂತಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.