ದಾವಣಗೆರೆ, ಮೇ 10 (DaijiworldNews/HR): ಅಮೇರಿಕಾದಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿಕೊಂಡು ದಾವಣಗೆರೆಗೆ ಬಂದಿದ್ದ ವ್ಯಕ್ತಿಯೊಬ್ಬರ ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದ ಕಾರಣ ಮತದಾನ ಮಾಡಲು ಸಾಧ್ಯವಾಗದಿರುವ ಘಟನೆ ನಡೆದಿದೆ.
ದಾವಣಗೆರೆಗೆಯ ರಾಘವೇಂದ್ರ ಕಮಾಲಕರ್ ಅವರು ಅಮೆರಿಕಾದಲ್ಲಿ ಸಾಫ್ಟ್ವೇರ್ ಉದ್ಯೋಗಿಯಾಗಿದ್ದು, ಮತದಾನಕ್ಕಾಗಿಯೇ ಊರಿಗೆ ಬಂದಿದ್ದಾರೆ. ಆದರೆ ಅವರ ಹೆಸರೇ ಮತದಾನದ ಪಟ್ಟಿಯಲ್ಲಿ ಇರಲಿಲ್ಲ.ಹಾಗಾಗಿ ಮತದಾನ ಮಾಡಲು ಸಾಧ್ಯವಾಗಲಿಲ್ಲ.
ಇನ್ನು ಜನವರಿ ತಿಂಗಳಲ್ಲಿ ನನ್ನ ಹೆಸರು ಪಟ್ಟಿಯಲ್ಲಿರುವುದು ನನಗೆ ಮಾಹಿತಿಯೂ ಬಂದಿತ್ತು. ವಿದ್ಯಾನಗರದ ಮಾಗನೂರು ಬಸಪ್ಪ ಶಾಲೆಯಲ್ಲಿ ನಾನು ಮತ ಚಲಾಯಿಸಲು ಬಂದಾಗ ಪಟ್ಟಿಯಲ್ಲಿ ನನ್ನ ಹೆಸರೇ ಇಲ್ಲ. ಮತದಾನ ಮಾಡಲಿಕ್ಕೆ ಆಗಲೇ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮತದಾನ ಮಾಡುವ ಸಲುವಾಗಿಯೇ ನಾನು ಅಮೇರಿಕಾದಿಂದ ಸುಮಾರು ಒಂದೂವರೆ ಲಕ್ಷ ಖರ್ಚು ಮಾಡಿಕೊಂಡು ಬಂದಿದ್ದೇನೆ ಆದರೆ ನನಗೆ ಮತದಾನ ಮಾಡಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.