ಬೆಂಗಳೂರು, ಮೇ 10 (DaijiworldNews/HR): ಬಜರಂಗದಳ ನಿಷೇಧ ಮೂರ್ಖತನಕ್ಕೆ ಒಂದು ಉದಾಹರಣೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆ ಕುರಿತಾಗಿ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ಮತದಾನ ಮಾಡಿ ಮಾತನಾಡಿದ ಅವರು, ನಾವು ಯಾವಾಗಲೂ ಬಜರಂಗಬಲಿಯನ್ನು ಪೂಜಿಸುತ್ತೇವೆ, ಹನುಮಾನ್ ಚಾಲೀಸಾ ಪಠಣ ಮಾಡುತ್ತೇವೆ, ಆದರೆ ಕಾಂಗ್ರೆಸ್ಗೆ ಇದು ಚುನಾವಣಾ ವಿಷಯವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ಕರ್ನಾಟಕವು ಹನುಮಂತನ ಜನ್ಮಸ್ಥಳವಾಗಿದೆ. ಕಾಂಗ್ರೆಸ್ ನಾಯಕರು ಅಲ್ಲಿ, ಇಲ್ಲಿ ಹೇಳಿಕೆ ನೀಡುತ್ತಿಲ್ಲ, ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧಿಸುವುದಾಗಿ ಹೇಳುತ್ತಿದೆ. ಇದು ಮೂರ್ಖತನಕ್ಕೆ ನಿದರ್ಶನವಾಗಿದೆ ಎಂದಿದ್ದಾರೆ.
ಕಳೆದ ವಾರ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ತನ್ನ ಪ್ರಣಾಳಿಕೆಯಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡುವುದಾಗಿ ಕಾಂಗ್ರೆಸ್ ಪಕ್ಷ ಹೇಳಿತ್ತು.
ಬಜರಂಗದಳ ನಿಷೇಧ ಮಾಡುವ ಕಾಂಗ್ರೆಸ್ ನಿರ್ಧಾರದ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದ್ದು, ವಿಶ್ವ ಹಿಂದೂ ಪರಿಷತ್, ಬಜರಂಗದಳ ಮೇ 9ರಂದು ಹಲವೆಡೆ ಪ್ರತಿಭಟನೆ ನಡೆಸಿತ್ತು.