ಚಿಕ್ಕಮಗಳೂರು, ಮೇ 11 (DaijiworldNews/MS): ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ ರವಿ ಅನಾರೋಗ್ಯದ ಕಾರಣದಿಂದಾಗಿ ನಿನ್ನೆ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಿ.ಟಿ. ರವಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಹಿನ್ನಲೆಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮತದಾನದ ಬಳಿಕ ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶಾಸಕ ಸಿ.ಟಿ ರವಿ ಅವರು ಕಳೆದ ಕೆಲ ದಿನಗಳ ಹಿಂದೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಿದ್ದ ವೇಳೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಬಿಜೆಪಿ ಕಚೇರಿಯಿಂದ ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ ಸಿ.ಟಿ ರವಿ ಚಿಕಿತ್ಸೆ ನೀಡಲಾಗಿತ್ತು. ರವಿ ಅವರಿಗೆ ಕಿಡ್ನಿ ಸ್ಟೋನ್ನಿಂದ ಹೊಟ್ಟೆ ನೋವು ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದರು. ಇದೀಗ ಮತ್ತೊಮ್ಮೆ ಸಿ.ಟಿ. ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.