ಮುಂಬೈ, ಮೇ 11 (DaijiworldNews/MS): ಮಹಾರಾಷ್ಟ್ರದಲ್ಲಿ ಉದ್ಬವ್ ಠಾಕ್ರೆ - ಏಕನಾಥ್ ಶಿಂಧೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ತೀರ್ಪಿ ನೀಡಿದ್ದು, ಮಹಾರಾಷ್ಟ್ರ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಮರುಸ್ಥಾಪನೆ ಮಾಡಲು ಸಾದ್ಯವಿಲ್ಲ ಎಂದು ಸುಪ್ರೀಂ ಹೇಳಿದೆ.
ಮಹಾರಾಷ್ಟ್ರ ಮೂಲ ಶಿವಸೇನೆಯಿಂದ ಬಂಡಾಯವೆದ್ದು ಏಕನಾಥ ಶಿಂಧೆ ಹಿಂದೆ ಹೋಗಿದ್ದ 16 ಮಂದಿ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಕೋರಿ ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣ ಸಲ್ಲಿಸಿದ್ದ ಅರ್ಜಿ ಸೇರಿದಂತೆ 2 ತೀರ್ಪುಗಳನ್ನು ಸುಪ್ರೀಂಕೋರ್ಟ್ ಇಂದು ಪ್ರಕಟಿಸಿದೆ.
ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಅವರನ್ನು ಮತ್ತೆ ಮಹಾರಾಷ್ಟ್ರ ಮುಖ್ಯಮಂತ್ರಿಯನ್ನಾಗಿ ಮಾಡಲು ಸಾಧ್ಯವಿಲ್ಲ. ಬಹುಮತ ಸಾಬೀತುಪಡಿಸಲಿಲ್ಲ ಎಂಬ ಕಾರಣಕ್ಕೆಉದ್ಧವ್ ಠಾಕ್ರೆ ಅವರಿಗೆ ವಿನಾಯಿತಿ ನೀಡಲಾಗದು ಉದ್ಧವ್ ಅವರು ಸದನದಲ್ಲಿ ಬಹುಮತವನ್ನು ಕಳೆದುಕೊಂಡಿದ್ದಾರೆ ಎಂಬ ತೀರ್ಮಾನಕ್ಕೆ ಬಂದ ರಾಜ್ಯಪಾಲ ಬಿಎಸ್ ಕೋಶ್ಯಾರಿ ಅವರು ತಪ್ಪೆಸಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪಿನಲ್ಲಿ ತಿಳಿಸಿದೆ.