ಮಂಡ್ಯ,ಮಾ27(AZM):ಕೇಂದ್ರ ಸರಕಾರದ ಏಜೆಂಟ್ ಆಗಿ ಕೆಲಸ ಮಾಡುತ್ತಿರುವ ಐಟಿ ಅಧಿಕಾರಿಗಳು ನನ್ನ ಮೇಲೆ ದಬ್ಬಾಳಿಕೆ ಮಾಡಿದರೆ ಪ್ರಾಯಶ್ಚಿತ ಅನುಭವಿಸಬೇಕಾಗುತ್ತದೆ ಎಂದು ಸಿಎಂ ಕುಮಾರಸ್ವಾಮಿಯವರು ಎಚ್ಚರಿಕೆ ನೀಡಿದ್ದಾರೆ.
ಮಂಡ್ಯದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ನಾಳೆ ರಾಜ್ಯದಲ್ಲಿ ಐಟಿ ದಾಳಿ ನಡೆದರೂ ನಡೆಯಬಹುದು. ಈ ಕುರಿತು ನನ್ನ ಆತ್ಮೀಯರಾಗಿರುವ ಬಿಜೆಪಿಯವರೊಬ್ಬರು ಕರೆ ಮಾಡಿ ವಿಷಯ ತಿಳಿಸಿದ್ದಾರೆ.ಐಟಿ ಇಲಾಖೆ ಕರ್ನಾಟಕ - ಗೋವಾ ವಿಭಾಗದ ಡಿಜಿ ಬಾಲಕೃಷ್ಣನ್ ಮಾಹಿತಿ ಸಂಗ್ರಹಿಸಿದ್ದಾರೆ. 250 ರಿಂದ 300 ಅಧಿಕಾರಿಗಳನ್ನು ದಾಳಿಗೆ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಐಟಿ ಅಧಿಕಾರಿಗಳು ನನ್ನ ಮೇಲೆ ದಬ್ಬಾಳಿಕೆ ನಡೆಸಿದರೆ ಪ್ರಾಯಶ್ಚಿತ ಅನುಭವಿಸಬೇಕಾಗುತ್ತದೆ, ಕೇಂದ್ರದವರ ಬಗ್ಗೆ ಅಧಿಕಾರಿಗಳು ಎಚ್ಚರಿಕೆಯಿಂದ ಇರುವುದು ಸೂಕ್ತ ಎಂದು ಸಿಎಂ ಕುಮಾರಸ್ವಾಮಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಐಟಿ ದಾಳಿಯಲ್ಲಿ ಸಾಮಾನ್ಯವಾಗಿ ರಾಜ್ಯ ಸರ್ಕಾರದ ಪೊಲೀಸ್ ಇಲಾಖೆಯ ನೆರವು ಪಡೆದುಕೊಳ್ತಾರೆ, ಅದು ಬಿಟ್ಟು ಸಿ ಆರ್ ಪಿ ಎಫ್ ಕರೆಸಿಕೊಂಡು ದಾಳಿ ಮಾಡಲು ಹೊರಟಿರುವುದು ಬಹಳ ದಿನ ನಡೆಯಲ್ಲ, ಐಟಿ ಅಧಿಕಾರಿಗಳು ಈ ರೀತಿ ದಬ್ಬಾಳಿಕೆ ಮಾಡಿದರೆ ವೆಸ್ಟ್ ಬೆಂಗಾಲ್ ಮುಖ್ಯಮಂತ್ರಿ ಮಾಡಿದ ಹಾಗೆ ನಾನು ಮಾಡಬೇಕಾಗುತ್ತದೆ' ಎಂದು ಎಚ್ಚರಿಸಿದ್ದಾರೆ.