ಮುಂಬೈ,ಮೇ13 (DaijiworldNews/KH):ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ಒಂದೇ ಕುಟುಂಬದ 5 ಕಾರ್ಮಿಕರು ಚರಂಡಿ ಸ್ವಚ್ಚಗೊಳಿಸುತ್ತಿದ್ದ ಸಮಯ ಉಸಿರುಗಟ್ಟಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಗುರುವಾರ ಮಧ್ಯಾಹ್ನದಂದ್ದು 6 ಕಾರ್ಮಿಕರು ಭೌಚಾ ತಾಂಡಾ ಪ್ರದೇಶದ ಜಮೀನಿನಲ್ಲಿದ್ದ ಚರಂಡಿಯನ್ನು ಸ್ವಚ್ಛಗೊಳಿಸುತ್ತಿದ್ದು, ಚರಂಡಿಗೆ ಇಳಿದವರು ಸ್ವಲ್ಪ ಹೊತ್ತಿನಲ್ಲಿ ಒಬ್ಬೊಬ್ಬರಂತೆ ಅಸ್ವಸ್ಥರಾಗಿದ್ದು ಅವರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಅಲ್ಲಿ ಅಸ್ವಸ್ಥಗೊಂಡಿದ್ದ 6 ಜನರ ಪೈಕಿ ಐವರು ಸಾವನ್ನಪ್ಪಿದ್ದು.ಇನ್ನೊಬ್ಬ ಕಾರ್ಮಿಕನ ಸ್ಥಿತಿಯೂ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಲ್ಲಿ ಸಾವನ್ನಪ್ಪಿದವರು ಒಂದೇ ಕುಟುಂಬದ ಸದಸ್ಯರು ಎಂದು ತಿಳಿದು ಬಂದಿದ್ದು, ಶವಗಳನ್ನೂ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಚರಂಡಿ ಸ್ವಚ್ಛಗೊಳಿಸುತ್ತಿದ್ದ ವೇಳೆ ಕಾರ್ಮಿಕರು ವಿಷಕಾರಿ ಗಾಳಿ ಸೇವಿಸಿ ಬಳಿಕ ಉಸಿರುಗಟ್ಟಿದ್ದರಿಂದ ಅಸ್ವಸ್ಥರಾಗಿ ಸಾವನ್ನಪ್ಪಿದ್ದಾರೆ ಎಂಬುದು ತಿಳಿದುಬಂದಿದೆ. ಕಾರ್ಮಿಕರ ಆಕಸ್ಮಿಕ ಸಾವಿನ ಕುರಿತಾಗಿ ಸೋನ್ಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಘಟನೆ ಬಗ್ಗೆ ತನಿಖೆಯನ್ನು ಮುಂದುವರಿಸಲಾಗಿದೆ ಎಂದರು.