ಶ್ರೀನಗರ,ಮೇ14(DaijiworldNews/KH):ಜಮ್ಮು–ಕಾಶ್ಮೀರದ ಉರಿ ಸೆಕ್ಟರ್ನಲ್ಲಿ ಭಾರತೀಯ ಸೇನಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಈ ವೇಳೆ ಎನ್ ಕೌಂಟರ್ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಎನ್ಕೌಂಟರ್ ನಡೆದಿರುವ ಬಗ್ಗೆ ಟ್ವೀಟ್ ಮಾಡಿರುವ ಕಾಶ್ಮೀರ ಝೋನ್ ಪೊಲೀಸರು, ಅನಂತ್ನಾಗ್ನ ಅಂದ್ವಾನ್ ಸಾಗಮ್ ಪ್ರದೇಶದಲ್ಲಿ ಎನ್ಕೌಂಟರ್ ಆರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ತಿಳಿಸಿದ್ದಾರೆ. ಜಮ್ಮು – ಕಾಶ್ಮೀರದ ಉರಿ ಸೆಕ್ಟರ್ನಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿತ್ತು.ಭಾರತೀಯ ಸೇನಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಸೇನಾ ಮೂಲಗಳು ತಿಳಿಸಿದೆ.