ಶಿಮ್ಲಾ, ಮೇ 14 (DaijiworldNews/HR): ರಾಹುಲ್ ಗಾಂಧಿ ಮುಂದಿನ ಪ್ರಧಾನಿ ಹುದ್ದೆ ಅಭ್ಯರ್ಥಿ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಜನಾದೇಶ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಇದು ಮೆಟ್ಟಿಲು ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಮಾತನಾಡಿ, ಈ ಚುನಾವಣೆಯ ಫಲಿತಾಂಶವು ಲೋಕಸಭೆ ಚುನಾವಣೆಗೆ ಮೆಟ್ಟಿಲು, ಎಲ್ಲಾ ಬಿಜೆಪಿಯೇತರ ಪಕ್ಷಗಳು ಒಗ್ಗೂಡಿ ಬಿಜೆಪಿಯನ್ನು ಸೋಲಿಸಬೇಕೆಂದು ನಾನು ಭಾವಿಸುತ್ತೇನೆ. ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗಬಹುದು ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.