ಬೆಂಗಳೂರು, ಮೇ 14 (DaijiworldNews/HR): ಕರ್ನಾಟಕದಲ್ಲಿ ಬಹುಮತ ಪಡೆದುಕೊಂಡಿರುವ ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನಡುವೆ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರಾಗಬಹುದು ಎಂಬ ಚರ್ಚೆ ಎಂದೆಡೆ ಜೋರಾಗಿದ್ದರೆ ಮತ್ತೊಂದೆಡೆ ಮುಂದಿನ ವಿಪಕ್ಷ ನಾಯಕ ಯಾರು ಎಂಬ ಚರ್ಚೆಯೂ ಆರಂಭವಾಗಿದೆ.
ಮುಂದಿನ ವಿಪಕ್ಷ ನಾಯಕನ ಪಟ್ಟಿಯಲ್ಲಿ ಬಸವರಾಜ ಬೊಮ್ಮಾಯಿ, ಸುನಿಲ್ ಕುಮಾರ್, ಯತ್ನಾಳ್ ಹೆಸರು ಕೇಳಿ ಬರುತ್ತಿದೆ.
ಇನ್ನು ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿದ್ದ ಹಲವು ಪ್ರಮುಖರು ಸೋಲನುಭವಿಸಿದ್ದು, ಹೀಗಾಗಿ ಬಸನಗೌಡ ಪಾಟೀಲ್ ಯತ್ನಾಳ್ ಅಥವಾ ಸುನಿಲ್ ಕುಮಾರ್ ವಿಪಕ್ಷ ನಾಯಕನ ಸ್ಥಾನಕ್ಕೆ ಬಿಜೆಪಿಯ ಆಯ್ಕೆಯಾಗಬೇಕಾಗುತ್ತದೆ.
ಆದರೆ ಬಿಜೆಪಿ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುವುದನ್ನು ಕಾದುನೋಡಬೇಕಿದೆ.