ಬೆಂಗಳೂರು, ಮೇ 14 (DaijiworldNews/MS): ಪ್ರಚಂಡ ಗೆಲುವಿನ ನಂತರ ಸರ್ಕಾರ ರಚನೆಗೆ ಮುಂದಾಗಲಿರುವ ಕಾಂಗ್ರೆಸ್ ನಲ್ಲಿ ಸಿಎಂ ಪಟ್ಟಕ್ಕೆ ಪೈಪೋಟಿ ಜೋರಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರೂ ಮುಖ್ಯಮಂತ್ರಿ ಹುದ್ದೆಗಾಗಿ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. ಇಂದು ಸಂಜೆ ವೇಳೆಗೆ ಕಾಂಗ್ರೆಸ್ನ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರು ಫೈನಲ್ ಆಗಲಿದೆ.
ಇನ್ನೊಂದೆಡೆ ಸಿದ್ದರಾಮಯ್ಯ ನಿವಾಸದ ಮುಂದೆಯೂ ಸಂಭ್ರಮ ಕಳೆಗಟ್ಟಿದೆ. 'ಸಿದ್ದರಾಮಯ್ಯ ಸಿಎಂ' ಎಂಬ ಫ್ಲೆಕ್ಸ್ ರಾರಾಜಿಸುತ್ತಿವೆ. ಇದರ ಬೆನ್ನಲ್ಲೇ ಡಿ ಕೆ ಶಿವಕುಮಾರ್ ಅಭಿಮಾನಿಗಳು ಎಚ್ಚೆತ್ತುಕೊಂಡು ಡಿಕೆಶಿ ನಿವಾಸದ ಮುಂದೆ ‘ಮುಂದಿನ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು’ ಎಂಬ ಫ್ಲೆಕ್ಸ್ ರಾರಾಜಿಸುವಂತೆ ಮಾಡಿದ್ದಾರೆ.
ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದಿಢೀರ್ ಆಗಿ ದೆಹಲಿಗೆ ತೆರಳುತ್ತಿದ್ದು ಇಂದು ಸಂಜೆ 6ಕ್ಕೆ ಶಾಂಗ್ರಿಲಾ ಹೋಟೆಲ್ನಲ್ಲಿ ಕಾಂಗ್ರೆಸ್ ಶಾಸಕರ ಸಭೆ ನಡೆಯಲಿದ್ದು ಇಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ